ಮಹಾಲಿಂಗೇಶ್ವರ ದೇವಳದ ಬಳಿಯಿಂದ ದನ ಕಳವು !- ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ವಿಹಿಂಪ, ಬಜರಂಗದಳದಿಂದ ದೇವಳದ ಆಡಳಿತಾಧಿಕಾರಿಗೆ ಮನವಿ

0

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ಬಳಿಯಿಂದ ದನ ಕಳ್ಳತನ ಆಗಿರುವ ಮಾಹಿತಿ ಬಗ್ಗೆ ತನಿಖೆ ನಡೆಸಿ,ಭದ್ರತಾ ವ್ಯವಸ್ಥೆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಮನವಿ ದೇವಳದ ಆಡಳಿತಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕಳೆದ ಒಂದು ವಾರದಿಂದ ಗೋ ಕಳ್ಳತನದ ಮಾಹಿತಿ ನಮ್ಮ ಸಂಘಟನೆಗೆ ಬಂದಿದ್ದು ದೇವಳದ ಭದ್ರತಾ ಸಿಬ್ಬಂದಿಗಳಿಗೆ ಮಾಹಿತಿ ಇದ್ದರೂ ಯಾವುದೇ ದೂರು ದಾಖಲಿಸದೆ ಇರುವುದರಿಂದ ಮುಂದಿನ ದಿನಗಳಲ್ಲಿ ಇಂತಹ ಗೋಕಳ್ಳತನ ನಡೆಯುವ ಸಾಧ್ಯತೆ ಇದ್ದು, ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿ ಇಲಾಖಾ ತನಿಖೆ ನಡೆಸಿ ಇಂತಹ ಕುಕೃತ್ಯಗಳನ್ನು ತಡೆಯುವಂತೆ ಹಾಗೂ ತಮ್ಮ ಭದ್ರತಾ ಸಿಬ್ಬಂದಿಗಳಿಗೆ ಸರಿಯಾದ ಎಚ್ಚರಿಕೆಯಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಬೇಕಾಗಿ ಆಗ್ರಹಿಸುವಂತೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಕಾರ್ಯದರ್ಶಿ ಜಿತೇಶ್ ಬಲ್ನಾಡ್,ಬಜರಂಗದಳ ಪುತ್ತೂರು ನಗರ ಪ್ರಖಂಡ ಸಂಯೋಜಕರಾದ ಜಯಂತ್ ಕುಂಜೂರುಪಂಜ, ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡ ಸಂಯೋಜಕರಾದ ವಿಶಾಕ್ ಸಸಿಹಿತ್ಲು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here