ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೆ, ಮಖೆ ಜಾತ್ರೆ ಮತ್ತು ಉತ್ಸವಾದಿಗಳು ಫೆ. 21ರಿಂದ ಮಾ. 19ರ ತನಕ ನಡೆಯಲಿದ್ದು, ಫೆ. 21ರಂದು ಬೆಳಗ್ಗೆ ಧ್ವಜಾರೋಹಣ ನೆರವೇರಿಸಲಾಗಿ ಉತ್ಸವಾದಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
ವೇ| ಮೂ| ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪವಿತ್ರಪಾಣಿ ಕರಾಯ ವಿಷ್ಣುಮೂರ್ತಿ ಕುದ್ದಣ್ಣಾಯರ ಉಪಸ್ಥಿತಿಯಲ್ಲಿ ಕಾಲಾವಧಿ ಜಾತ್ರೆ, ಮಖೆ ಜಾತ್ರೆ ಮತ್ತು ಉತ್ಸವಾದಿಗಳ ಸಂದರ್ಭ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಮೊದಲ ದಿನವಾದ ಇಂದು ಸಂಜೆ 7ರಿಂದ ಉತ್ಸವ ನಡೆಯಿತು.
ಈ ಸಂದರ್ಭ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಚೆನ್ನಪ್ಪ ಗೌಡ, ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಕರುಣಾಕರ ಸುವರ್ಣ, ಮಾಜಿ ಸದಸ್ಯರಾದ ರಾಧಾಕೃಷ್ಣ ನಾಯಕ್, ಉಷಾ ಮುಳಿಯ, ರಾಮಚಂದ್ರ ಮಣಿಯಾಣಿ, ಪ್ರಮುಖರಾದ ವೆಂಕಪ್ಪ ಪೂಜಾರಿ, ಹರೀಶ್ ನಾಯಕ್, ರಾPಜ್‌ಗೋಪಾಲ್ ಭಟ್ ಕೈಲಾರ್, ಗೋಪಾಲ ಹೆಗ್ಡೆ, ಸುಂದರ ಗೌಡ, ಸುಧಾಕರ ಕೋಟೆ, ದೇವಾಲಯದ ವ್ಯವಸ್ಥಾಪಕ ವೆಂಕಟೇಶ ರಾವ್, ಸಿಬ್ಬಂದಿ ಕೃಷ್ಣಪ್ರಸಾದ್ ಬಡಿಲ, ದಿವಾಕರ, ಪದ್ಮನಾಭ ಉಪಸ್ಥಿತರಿದ್ದರು.