ಅರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿಯವರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸನ್ಮಾನ

0

ಪುತ್ತೂರು: ಅರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಸತತವಾಗಿ 3ನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾದ ಎಚ್.ಮಹಮ್ಮದ್ ಆಲಿಯವರನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕಚೇರಿಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ಶಾಲು ಹೊದಿಸಿ ಸನ್ಮಾನಿಸಿ ನೂತನ ಆಡಳಿತ ಮಂಡಳಿಯ ನಿರ್ದೇಶಕರುಗಳಿಗೆ ಶುಭ ಹಾರೈಸಿದರು.

ಸಹಕಾರಿ ಸಂಘದ ಚುನಾವಣೆಯಲ್ಲಿ ತನ್ನ ತಂಡ ಅವಿರೋಧವಾಗಿ ಆಯ್ಕೆಯಾಗಲು ಸಹಕಾರ ನೀಡಿದ ರಾಜೇಂದ್ರ ಕುಮಾರ್ ರವರಿಗೆ ಮಹಮ್ಮದ್ ಆಲಿಯವರು ಈ ಸಂದರ್ಭದಲ್ಲಿ ಕೃತಜ್ಞತೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಅರ್ಯಾಪು ಸಹಕಾರಿ ಸಂಘದ ಉಪಾಧ್ಯಕ್ಷ ಸುರೇಂದ್ರ ರೈ ಬಳ್ಳಮಜಲು, ನಿರ್ದೇಶಕರುಗಳಾದ ಸದಾನಂದ ಶೆಟ್ಟಿ ಕೂರೇಲು, ಗಣೇಶ್ ರೈ ಮೂಲೆ ಮಡಪ್ಪಾಡಿ, ಇಸ್ಮಾಯಿಲ್ ಮಲಾರ್, ರಂಜಿತ್ ಬಂಗೇರ, ಶೀನಪ್ಪ ಮರಿಕೆ, ಗಣೇಶ್ ರೈ ಬಳ್ಳಮಜಲು, ಸಂಶುದ್ದೀನ್ ನೀರ್ಕಜೆ, ಚಂದ್ರಕಲಾ ಕುರಿಯ, ತೆರೇಜ ಸಿಕ್ವೇರಾ ಮರೀಲ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಯಂತಿ ಭಾಸ್ಕರ್, ಸಿಬ್ಬಂದಿ ಅರ್ಜುನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here