ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್, ಪಿಎಂ ಪೋಷಣ್ ತಾಲೂಕು ಪಂಚಾಯತ್ ಪುತ್ತೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇದರ ಸಂಯುಕ್ತಾಶ್ರಯದಲ್ಲಿ ಶ್ರೀಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆಎಂಎಫ್ ಸಂಸ್ಥೆ ಸಹಭಾಗಿತ್ವದಲ್ಲಿ ಮಧ್ಯಾಹ್ನ ಉಪಾಹಾರ ಯೋಜನೆಯಡಿ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರ ಸಾಯಿ ಶೂರ್ ರಾಗಿ ಹೆಲ್ತ್ಮಿಕ್ಸ್ ವಿತರಣೆಯ ತಾಲೂಕು ಮಟ್ಟದ ಉದ್ಘಾಟನಾ ಕಾರ್ಯಕ್ರಮ ಫೆ.22ರಂದು ಹಾರಾಡಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.
ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಸಾಂಕೇತಿಕವಾಗಿ ಮಕ್ಕಳಿಗೆ ರಾಗಿ ಹೆಲ್ತ್ಮಿಕ್ಸ್ ವಿತರಿಸಲಾಯಿತು. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಅಧ್ಯಕ್ಷತೆ ವಹಿಸಿದ್ದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್ ಪಾಟಾಳಿ, ನಗರಸಭಾ ಸದಸ್ಯೆ ಪ್ರೇಮಲತಾ, ಮುಖ್ಯಶಿಕ್ಷಕ ಕುಕ್ಕ, ಎಸ್ಡಿಎಂಸಿ ಅಧ್ಯಕ್ಷೆ ಸುಲೋಚನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.