ಮುರ: ಸ್ಕೂಟರ್‌ ಮತ್ತು ಟಿಪ್ಪರ್‌ ನಡುವೆ ಡಿಕ್ಕಿ- ಇಬ್ಬರ ಸ್ಥಿತಿ ಗಂಭೀರ

0

ಪುತ್ತೂರು: ನಗರದ ಹೊರವಲಯದ ಮುರದ ಎಂಪಿಎಂ ಸ್ಕೂಲ್‌ ಬಳಿ ಸ್ಕೂಟರ್‌ ಮತ್ತು ಟಿಪ್ಪರ್‌ ನಡುವೆ ಡಿಕ್ಕಿ ಸಂಭವಿಸಿದೆ. ಸ್ಕೂಟರ್‌ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಚಿಂತಾಜನಕ ಸ್ಥಿತಿಯಲ್ಲಿ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕೆಎ 21 ಡಬ್ಲೂ 0247 ನಂಬರಿನ ಸ್ಕೂಟರ್‌ ಪುತ್ತೂರಿನಿಂದ ಕಬಕ ಕಡೆಗೆ ವೇಗವಾಗಿ ಹೋಗುತ್ತಿದ್ದ ವೇಳೆ ಕಬಕದಿಂದ ಪುತ್ತೂರ ಕಡೆ ಬರುತ್ತಿದ್ದ ಟಿಪ್ಪರ್‌ ಮುಖಾಮುಖಿ ಡಿಕ್ಕಿ ಹೊಡೆದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

LEAVE A REPLY

Please enter your comment!
Please enter your name here