ಫೆ.24ರಂದು ಓಜಾಲ ಉತ್ಸವ, ಸಾರ್ವಜನಿಕ‌ ಶ್ರೀ ಸತ್ಯನಾರಾಯಣ ಪೂಜೆ, ಸಭಾಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಓಜಲ ಕಬಡ್ಡಿ ಚಾಂಪಿಯನ್ ಶಿಪ್ – 2024

0

ವಿಟ್ಲ: ವಾಸುಕೀ ಸ್ಪೋರ್ಟ್ಸ್ ಕ್ಲಬ್(ರಿ.) ಟ್ರಸ್ಟ್ ಓಜಾಲ ಇದರ ಆಶ್ರಯದಲ್ಲಿ ದಶಮಾನೋತ್ಸವದ ಅಂಗವಾಗಿ ಫೆ.24ರಂದು ಓಜಾಲ ಉತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ಹಾಗೂ ಓಜಾಲ ಕಬಡ್ಡಿ ಚಾಂಪಿಯನ್ ಶಿಪ್ 2024 ನಡೆಯಲಿದೆ.

ಬೆಳಗ್ಗೆ ಗಣಪತಿ ಹವನ ನಡೆದು ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆದು ಅನ್ನ ಸಂತರ್ಪಣೆ ನಡೆಯಲಿದೆ. ಬೆಳಗ್ಗೆ 11.30 ಗಂಟೆಯಿಂದ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ವಾಸುಕೀ ಸ್ಪೋರ್ಟ್ಟ್ ಕ್ಲಬ್ ನ ಗೌರವಾಧ್ಯಕ್ಷರಾದ ಸೋಮಶೇಖರ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಸಾಧ್ವಿಶ್ರೀ ಮಾತಾನಂದಮಯಿ ರವರು ಆಶೀರ್ವಚನ ನೀಡಲಿದ್ದಾರೆ. ಬ್ರಹ್ಮಶ್ರೀ ರವೀಶ್ ತಂತ್ರಿ ಕುಂಟಾರುರವರು ಧಾರ್ಮಿಕ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ. ಬಳಿಕ ಮಧ್ಯಾಹ್ನ ಗಂಟೆ 1.30ರಿಂದ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಹಾಗೂ ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆ ಹಾಗೂ ಊರಿನ 6 ತಂಡಗಳ ಲೀಗ್ ಮಾದರಿಯ ಕಬಡ್ಡಿ ಪಂದ್ಯಾಟ ನಡೆಯಲಿದೆ.

ಸಾಯಂಕಾಲ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಾಸುಕೀ ಸ್ಪೋರ್ಟ್ಸ್ ಕ್ಲಬ್ ಓಜಾಲ ಇದರ ಅಧ್ಯಕ್ಷರಾದ ಮಿಥುನ್ ಓಜಾಲರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು‌ ಶಾಸಕರಾದ ಅಶೋಕ್ ಕುಮಾರ್ ರೈ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ. ಬಳಿಕ ವಾಸುಕೀ ಸ್ಪೋರ್ಟ್ಸ್ ಕ್ಲಬ್ (ರಿ.) ಟ್ರಸ್ಟ್, ಓಜಾಲ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಭಾಗಿತ್ವದಲ್ಲಿ ಸಾಯಂಕಾಲ ನಾಲ್ಕು ಗಂಟೆಯಿಂದ 62ಕೆ.ಜಿ. ವಿಭಾಗದ ಮ್ಯಾಟ್ ಅಂಕಣದ 32 ತಂಡಗಳ ಓಜಾಲ ಕಬಡ್ಡಿ ಚಾಂಪಿಯನ್ ಶಿಪ್ 2024 ನಡೆಯಲಿದೆ ಎಂದು ವಾಸುಕೀ ಸ್ಪೋರ್ಟ್ಸ್ ಕ್ಲಬ್ (ರಿ.) ಟ್ರಸ್ಟ್, ಓಜಾಲ ಇದರ ಅಧ್ಯಕ್ಷರಾದ ಮಿಥುನ್ ಓಜಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here