ಪುತ್ತೂರು: ಮೊಟ್ಟೆತ್ತಡ್ಕ ಕೆಮ್ಮಿಂಜೆ ವಿನಾಯಕ ಸ್ಪೋರ್ಟ್ಸ್ ಕ್ಲಬ್, ಮೊಟ್ಟೆತ್ತಡ್ಕ ಕೆಮ್ಮಿಂಜೆ ವಿನಾಯಕ ಯುವಕ ವೃಂದದ ಆಶ್ರಯದಲ್ಲಿ ದ.ಕ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್, ಪುತ್ತೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಯೋಗದೊಂದಿಗೆ ಕೆಮ್ಮಿಂಜೆಯ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಮ್ಯಾಟ್ ಅಂಕಣದ ಹೊನಲು ಬೆಳಕಿನ ಪುರುಷರ ಮುಕ್ತ 55ಕೆ.ಜಿ ವಿಭಾಗದ ಕಬಡ್ಡಿ ಪಂದ್ಯಾಟ “ವಿನಾಯಕ ಟ್ರೋಫಿ-2024” ಫೆ.24 ರಂದು ಸಂಜೆ ಕೆಮ್ಮಿಂಜೆ ಮಾತೃಶ್ರೀ ವೇದಿಕೆ ಮೈದಾನದಲ್ಲಿ ನಡೆಯಲಿದೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಮಾಜಿ ಶಾಸಕರಾದ ಸಂಜೀವ ಮಠಂದೂರು, ಶಕುಂತಳಾ ಟಿ.ಶೆಟ್ಟಿ, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ದ.ಕ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಕಾರ್ಯಾಧ್ಯಕ್ಷ ಹಾಗೂ ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ, ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಮಹಮದ್ ಆಲಿ, ಸ್ಥಳೀಯ ನಗರಸಭಾ ಸದಸ್ಯೆ ಶೈಲಾ ಪೈ, ಪಾಣಾಜೆ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಉಪೇಂದ್ರ ಬಲ್ಯಾಯ ದೇವಸ್ಯ, ಉದ್ಯಮಿ ರಫೀಕ್ ಎಂ.ಕೆ ಸಹಿತ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.
ಸನ್ಮಾನ:
ಈ ಸಂದರ್ಭದಲ್ಲಿ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ರವೀಂದ್ರ ಶೆಟ್ಟಿ ನುಳಿಯಾಲು, ಏಕಲವ್ಯ ಪ್ರಶಸ್ತಿ ಪುರಸ್ಕೃತ ಹಾಗೂ ರಾಷ್ಟ್ರೀಯ ಕಬಡ್ಡಿ ಆಟಗಾರ ಪ್ರಶಾಂತ್ ರೈ, ರಾಷ್ಟ್ರೀಯ ಕಬಡ್ಡಿ ಆಟಗಾರ ಸುಕೇಶ್ ಹೆಗ್ಡೆ, ಸ್ಥಳೀಯ ನಗರಸಭಾ ಸದಸ್ಯೆ ಶೈಲಾ ಪೈ, ಸಮಾರೋಪ ಸಮಾರಂಭದಲ್ಲಿ ಬಿ.ಎಫ್.ಸಿಯಲ್ಲಿ 38 ವರ್ಷಗಳ ಸೇವೆ ಸಲ್ಲಿಸಿದ ನಿವೃತ್ತ ಯೋಧ ಸುರೇಶ್ ನಾಯ್ಕ್, ರಂಗಭೂಮಿ ನಟ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿ ರಾಮಕುಂಜ, ಉದ್ಯಮಿ ರಫೀಕ್ ಎಂ.ಕೆ, ಅಬ್ದುಲ್ ಕುಂಞರವರುಗಳನ್ನು ಗುರುತಿಸಿ ವಿಶೇಷ ಸನ್ಮಾನ ನೆರವೇರಲಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.7676806506, 8722308563, 7899041399 ನಂಬರಿಗೆ ಸಂಪರ್ಕಿಸಬಹುದು ಎಂದು ಮೊಟ್ಟೆತ್ತಡ್ಕ ಕೆಮ್ಮಿಂಜೆ ವಿನಾಯಕ ಯುವಕ ವೃಂದ ಹಾಗೂ ವಿನಾಯಕ ಸ್ಪೋರ್ಟ್ಸ್ ಕ್ಲಬ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಥಮ= ರೂ.7777/-, ದ್ವಿತೀಯ= ರೂ.5555/-, ತೃತೀಯ= ರೂ. 3333/-, ಚತುರ್ಥ= ರೂ.2222/- ಹಾಗೂ ವಿನಾಯಕ ಟ್ರೋಫಿ ಜೊತೆಗೆ ಸವ್ಯಸಾಚಿ, ಉತ್ತಮ ದಾಳಿಗಾರ, ಉತ್ತಮ ಹಿಡಿತಗಾರ, ವೈಯಕ್ತಿಕ ಬಹುಮಾನಗಳನ್ನು ನೀಡಲಾಗುತ್ತದೆ.