ಈಶ್ವರಮಂಗಲ ಶ್ರೀ ಗಜಾನನ ಆ.ಮಾ ಶಾಲೆಯಲ್ಲಿ ಸಾಮೂಹಿಕ ಹುಟ್ಟುಹಬ್ಬ ಆಚರಣೆ

0

ಈಶ್ವರಮಂಗಲ: ಹನುಮಗಿರಿ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೆಬ್ರವರಿ ತಿಂಗಳ ವಿದ್ಯಾರ್ಥಿಗಳ ಸಾಮೂಹಿಕ ಹುಟ್ಟುಹಬ್ಬವನ್ನು ಫೆ.23ರಂದು ಆಚರಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ವಿವೇಕಾನಂದ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಹರೀಶ್ ಶಾಸ್ತ್ರಿ ಇವರು ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಜೀವನದ ಹಾದಿಗೆ ಸಾಧನೆ ಎಂಬುದು ಮುಖ್ಯ ಎಂದು ಹಿತನುಡಿಗಳನ್ನಾಡಿ ಶುಭ ಹಾರೈಸಿದರು.

ಪ್ರಾಂಶುಪಾಲರಾದ ಶಾಮಣ್ಣ ಅತಿಥಿಗಳ ಕಿರುಪರಿಚಯವನ್ನು ನೀಡಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಹುಟ್ಟು ಹಬ್ಬದ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ಕಿರು ಕಾಣಿಕೆಯನ್ನು ನೀಡಿ, ಹುಟ್ಟು ಹಬ್ಬದ ಶುಭಾಶಯವನ್ನು ಹಾಡಿನೊಂದಿಗೆ ತಿಳಿಸಿದರು.ಈ ಕಾರ್ಯಕ್ರಮದಲ್ಲಿ ಮುಖ್ಯ ಗುರುಗಳಾದ ಅಮರನಾಥ ಬಿ ಪಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಶಿಕ್ಷಕಿರಾದ ಸುಮಲತಾ,ಭವ್ಯ, ಪ್ರಸಿದಾರವರು ಆರತಿಯನ್ನು ಬೆಳಗಿದರು. ಅನನ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here