ಅಕ್ರಮ ಅಡಿಕೆ ಆಮದು ತಡೆಗೆ ತುರ್ತು ಕ್ರಮ- ಪ್ರಧಾನ ಮಂತ್ರಿಯವರಿಗೆ ಕ್ಯಾಂಪ್ಕೊ ಮನವಿ

0

ಮಂಗಳೂರು: ವಿದೇಶಿ ಅಡಿಕೆ ಅಕ್ರಮವಾಗಿ ದೇಶದೊಳಕ್ಕೆ ಬರುತ್ತಿದ್ದು, ದೇಶೀ ಅಡಿಕೆಯ ಮಾರುಕಟ್ಟೆಗೆ ತೀವ್ರ ಹೊಡೆತ ನೀಡುತ್ತಿದೆ.ಇಂಡೊನೇಷ್ಯಾ, ಬರ್ಮಾದಿಂದ ಬರುವ ಅಡಿಕೆಗಳು ಕಳಪೆ ಗುಣಮಟ್ಟದ್ದಾಗಿದ್ದು ಮನುಷ್ಯರ ಉಪಯೋಗಕ್ಕೆ ಯೋಗ್ಯವಾಗಿಲ್ಲ.ಹೀಗಾಗಿ,ವಿದೇಶದಿಂದ ಅಕ್ರಮವಾಗಿ ಬರುವ ಅಡಿಕೆಯ ಗುಣಮಟ್ಟದ ಪರೀಕ್ಷೆಯನ್ನು ಮಾನ್ಯತೆ ಪಡೆದ ಪ್ರಯೋಗಾಲಯದಲ್ಲಿ ಕಟ್ಟುನಿಟ್ಟಾಗಿ ನಡೆಸಬೇಕು ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ವಿನಂತಿಸಿದ್ದಾರೆ.


ಇತ್ತೀಚಿನ ದಿನಗಳಲ್ಲಿ ವಿದೇಶಿ ಅಡಿಕೆ ಅಕ್ರಮವಾಗಿ ದೇಶದೊಳಕ್ಕೆ ಬರುತ್ತಿದ್ದು ದೇಶೀ ಅಡಿಕೆಯ ಮಾರುಕಟ್ಟೆಗೆ ತೀವ್ರ ಹೊಡೆತ ನೀಡುತ್ತಿದೆ ಮತ್ತು ವಶಪಡಿಸಿಕೊಂಡ ಅಕ್ರಮ ಆಮದು ಅಡಿಕೆಯು ಕಡಿಮೆ ದರದಲ್ಲಿ ಹರಾಜು ಮೂಲಕ ಮಾರುಕಟ್ಟೆಗೆ ಬಿಡುಗಡೆಯಾಗಿ ದೇಶದ ಅಡಿಕೆ ಮಾರುಕಟ್ಟೆಯನ್ನು ನಾಶಗೊಳಿಸುತ್ತಿರುವ ಬಗ್ಗೆ ಕ್ಯಾಂಪ್ಕೊ ತೀವ್ರ ಕಳವಳ ವ್ಯಕ್ತಪಡಿಸಿದೆ.
ಕ್ಯಾಂಪ್ಕೊದ ನಿರಂತರ ಪ್ರಯತ್ನದಿಂದ ಕೇಂದ್ರ ಸರಕಾರ ಇತ್ತೀಚಿಗೆ ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು ಕಿಲೋಗೇ ರೂ.351 ನಿಗದಿಪಡಿಸಿತ್ತು.ಆದರೆ ಅಕ್ರಮ ಅಮದು ಅಡಿಕೆಯನ್ನು ವಶಪಡಿಸಿಕೊಂಡ ಕಸ್ಟಮ್ಸ್, ಡಿಆರ್‌ಐ ಅಥವಾ ಸಂಬಂಧ ಪಟ್ಟ ಇತರ ಇಲಾಖೆಯ ಅಽಕಾರಿಗಳು ವಶಪಡಿಸಿಕೊಂಡ ಅಡಿಕೆಯನ್ನು ಹರಾಜು ನಡೆಸುವ ಸಂದರ್ಭ ಕನಿಷ್ಠ ಆಮದು ಬೆಲೆಗಿಂತ ಕಡಿಮೆ ಬೆಲೆಯಲ್ಲಿ ವರ್ತಕರು ಖರೀದಿ ಮಾಡಿ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿರುವುದು ಪರಿಸ್ಥಿತಿಯನ್ನು ಇನ್ನಷ್ಟು ಬಿಗಡಾಯಿಸಿದೆ.ಇಂಡೋನೇಷ್ಯಾ,ಬರ್ಮಾ ಮುಂತಾದ ದೇಶಗಳಿಂದ ಆಮದು ಆಗುವ ಅಡಿಕೆಯ ಗುಣಮಟ್ಟ ತುಂಬಾ ಕಳಪೆ.ಇವು FSSAI ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸುವುದಿಲ್ಲ ಮತ್ತು ಮನುಷ್ಯನ ಉಪಯೋಗಕ್ಕೆ ಯೋಗ್ಯವಾಗಿರುವುದಿಲ್ಲ.ಆದುದರಿಂದ ವಶಪಡಿಸಿಕೊಂಡ ಅಡಿಕೆಯ ಗುಣಮಟ್ಟದ ಪರೀಕ್ಷೆಯನ್ನು ಮಾನ್ಯತೆ ಪಡೆದ ಪ್ರಯೋಗಾಲಯದಲ್ಲಿ ಕಟ್ಟುನಿಟ್ಟಾಗಿ ನಡೆಸಬೇಕೆಂದು ಕ್ಯಾಂಪ್ಕೊ ಆಗ್ರಹಿಸಿದ್ದು, ಅಕ್ರಮ ಆಮದು ಅಡಿಕೆ ದೇಶೀ ಮಾರುಕಟ್ಟೆಗೆ ತೀವ್ರರೀತಿಯಲ್ಲಿ ಕೆಟ್ಟ ಪರಿಣಾಮ ನೀಡುವುದರ ಬಗ್ಗೆ ಕ್ಯಾಂಪ್ಕೊ ಅಧ್ಯಕ್ಷರು ಪ್ರಧಾನಮಂತ್ರಿಯವರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.


17 ಜಿಲ್ಲೆಗಳ ರೈತರಿಗೆ ಅಡಿಕೆ ಜೀವನಾಧಾರ:
ಕರ್ನಾಟಕದ 31 ಜಿಲ್ಲೆಗಳ ಪೈಕಿ 17 ಜಿಲ್ಲೆಗಳ ರೈತರು ಜೀವನಾಧಾರವಾಗಿ ಅಡಿಕೆಯನ್ನೇ ಅವಲಂಬಿಸಿದ್ದಾರೆ.ವಿದೇಶಿ ಅಡಿಕೆಯ ಒಳಹರಿವು ಈ ಭಾಗದ ರೈತರ ಜೀವನವನ್ನೇ ನರಕ ಸದೃಶಗೊಳಿಸಿದೆ.ಪ್ರಧಾನ ಮಂತ್ರಿಯವರ ಮಧ್ಯಪ್ರವೇಶ ರೈತರ ಜೀವನವನ್ನು ಹಸನಾಗಿಸುವುದಲ್ಲದೇ, ನೆಲಕಚ್ಚಿರುವ ಮಾರುಕಟ್ಟೆಯನ್ನು ಚೇತರಿಸಲು ಸಾಧ್ಯ ಎಂದು ಕ್ಯಾಂಪ್ಕೋ ಅಧ್ಯಕ್ಷರು ಆಶಾಭಾವನೆಯನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here