ಬಿಜೆಪಿ ಸುಳ್ಯ ಮಂಡಲ ಸಮಿತಿಗೆ ಆಯ್ಕೆ-ಉಪಾಧ್ಯಕ್ಷರಾಗಿ ಭಾಸ್ಕರ ಗೌಡ ಮತ್ತು ರಮೇಶ್ ಕಲ್ಪುರೆ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ರೈ ಮನವಳಿಕೆ, ಕಾರ್ಯದರ್ಶಿಯಾಗಿ ತೇಜಸ್ವಿನಿ ಕಟ್ಟಪುಣಿ

0

ಕಡಬ: ಬಿಜೆಪಿ ಸುಳ್ಯ ಮಂಡಲ ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಸುಳ್ಯ ಬಿಜೆಪಿ ಮಂಡಲ ಸಮಿತಿ ಕಚೇರಿಯಲ್ಲಿ ಫೆ.23ರಂದು ನಡೆದ ಸುಳ್ಯ ಬಿಜೆಪಿ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆಯಲ್ಲಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಅವರು ನೂತನ ಅಧ್ಯಕ್ಷ ವೆಂಕಟ್ ವಳಲಂಬೆ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭ ಮಂಡಲ ಸಮಿತಿಗೆ ನೂತನ ಪದಾಧಿಕಾರಿಗಳ ಘೋಷಣೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ, ತಾ.ಪಂ.ಮಾಜಿ ಸದಸ್ಯ, ನೆಲ್ಯಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರೂ ಆಗಿರುವ ಭಾಸ್ಕರ ಗೌಡ ಇಚ್ಲಂಪಾಡಿ, ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರೂ, ಬಿಜೆಪಿ ಸುಳ್ಯ ಮಂಡಲ ರೈತ ಮೋರ್ಚಾದ ಮಾಜಿ ಅಧ್ಯಕ್ಷರೂ, ರೋಟರಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಕೊಂಡಿರುವ ಕಡಬದ ರಮೇಶ್ ಕಲ್ಪುರೆ ಅವರು ನೇಮಕಗೊಂಡಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ, ಬಿಜೆಪಿ ಕೊಯಿಲ ಮಹಾಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ, ಬಿಜೆಪಿ ಪೆರಾಬೆ ಗ್ರಾಮ ಸಮಿತಿ ಮಾಜಿ ಅಧ್ಯಕ್ಷ, ಸವಣೂರು ಮಹಾಶಕ್ತಿ ಕೇಂದ್ರದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರದೀಪ್ ರೈ ಮನವಳಿಕೆ ಹಾಗೂ ಕಾರ್ಯದರ್ಶಿಯಾಗಿ ತಾ.ಪಂ.ಮಾಜಿ ಸದಸ್ಯೆ, ಸುಳ್ಯ ಮಂಡಲ ಮಹಿಳಾ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ, ಗೋಳಿತ್ತೊಟ್ಟು ಶಕ್ತಿಕೇಂದ್ರದ ಪ್ರಮುಖ್ ಆಗಿದ್ದ, ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ತೊಡಗಿಕೊಂಡಿರುವ ತೇಜಸ್ವಿನಿ ಕಟ್ಟಪುಣಿ ಅವರು ಆಯ್ಕೆಗೊಂಡಿದ್ದಾರೆ.

ನೂತನ ಅಧ್ಯಕ್ಷ ವೆಂಕಟ್ ವಳಲಂಬೆ ಅವರು ನೂತನ ಪದಾಧಿಕಾರಿಗಳ ಘೋಷಣೆ ಮಾಡಿದರು. ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಕಾರ್ಯದರ್ಶಿ ಎ.ವಿ.ತೀರ್ಥರಾಮ, ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಜಿಲ್ಲಾ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪೂವಪ್ಪ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here