ಫೆ.25-29:ಮೊಟ್ಟೆತ್ತಡ್ಕ-ಮಿಶನ್‌ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಜೀರ್ಣೋದ್ಧಾರದ ಬಗ್ಗೆ ಪರಿಹಾರ ಕಾರ್ಯಕ್ರಮಗಳು

0

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ-ಮಿಶನ್‌ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಜೀರ್ಣೋದ್ಧಾರದ ಕುರಿತು ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡುಬಂದ ದೋಷಗಳ ಪರಿಹಾರ ಕಾರ್ಯಕ್ರಮಗಳ ಬಗ್ಗೆ ವೈದಿಕ ಕಾರ್ಯಕ್ರಮಗಳು ಕ್ಷೇತ್ರದ ತಂತ್ರಿವರ್ಯರಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಫೆ.25ರಿಂದ 29ರ ವರೆಗೆ ನೆರವೇರಲಿರುವುದು.


ಫೆ.25 ರಂದು ಬೆಳಿಗ್ಗೆ ಸರ್ಪಸಂಸ್ಕಾರ ಪ್ರಾರಂಭಗೊಳ್ಳಲಿರುವುದು. ಫೆ.28 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣೆ, ಸ್ವಸ್ತಿ ಪುಣ್ಯಾಹವಾಚನ, ಸರ್ಪಸಂಸ್ಕಾರ ಮಂಗಲ ಹೋಮ, ಆಶ್ಲೇಷಾ ಬಲಿ, ಅಷ್ಟವಟು ಆರಾಧನೆ, ನಾಗನಲ್ಲಿ ತಂಬಿಲ ಸೇವೆ, ಮಂಗಳಾರತಿ, ಪ್ರಸಾದ ವಿತರಣೆ ಅನ್ನಸಂತರ್ಪಣೆ ಸಂಜೆ ಸ್ವಸ್ತಿ ಪುಣ್ಯಾಹವಾಚನ, ಮಹಾ ಸುದರ್ಶನ ಹೋಮ, ಪ್ರೇತಾವಾಹನೆ, ಬಾಧಾಕರ್ಷಣೆ, ಉಚ್ಚಾಟನೆ, ದುರ್ಗಾಪೂಜೆ, ಪ್ರಸಾದ ವಿತರಣೆ ನಡೆಯಲಿರುವುದು.


ಫೆ.29 ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ತಿಲಹೋಮ, ಪವಮಾನ ಹೋಮ, ಚಕ್ರಾಬ್ಜ ಮಂಡಲದಲ್ಲಿ ಸಾಯುಜ್ಯ ಪೂಜೆ, ದಂಪತಿ ಪೂಜೆ, ದ್ವಾದರಮೂರ್ತಿ ಬ್ರಾಹ್ಮಣ ಆರಾಧನೆ, ದೇವರಿಗೆ ಸಾನಿಧ್ಯ ಕಲಾಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಲಿರುವುದು. ಈ ಪುಣ್ಯ ಕಾರ್ಯದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಅರ್ಚಕರು ಮತ್ತು ಊರ ಹತ್ತು ಸಮಸ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here