ನೆಲ್ಯಾಡಿ: ಕುಸಿದು ಬಿದ್ದ ಗ್ರಾಮ ಆಡಳಿತ ಅಧಿಕಾರಿ ಕಚೇರಿ ಕಟ್ಟಡ

0

ನೆಲ್ಯಾಡಿ: ಗೋಡೆ ಬಿರುಕು ಬಿಟ್ಟು ಅಪಾಯಕಾರಿ ಸ್ಥಿತಿಯಲ್ಲಿ ಇದ್ದ ನೆಲ್ಯಾಡಿ ಗ್ರಾಮ ಆಡಳಿತ ಅಧಿಕಾರಿ ಕಚೇರಿ ಕಟ್ಟಡ ಕಳೆದ ರಾತ್ರಿ ಕುಸಿದು ಬಿದ್ದಿದೆ.
ಸುಮಾರು 50 ವರ್ಷ ಹಳೆಯ ಕಟ್ಟಡ ಇದಾಗಿದ್ದು, ಕಟ್ಟಡ ಕುಸಿದು ಬೀಳುವ ಹಂತದಲ್ಲಿರುವ ಬಗ್ಗೆ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಮೂರು ದಿನದ ಹಿಂದೆ ವರದಿ ಪ್ರಕಟವಾಗಿತ್ತು. ಇಲ್ಲಿದ್ದ ದಾಖಲೆಗಳನ್ನು ಅಧಿಕಾರಿಗಳು ನೆಲ್ಯಾಡಿ ಗ್ರಾಮ ಪಂಚಾಯತ್ ಕಚೇರಿಗೆ ಸ್ಥಳಾಂತರ ಮಾಡಿದ್ದರು. ರಾತ್ರಿ ವೇಳೆ ಕಟ್ಟಡ ಕುಸಿದು ಬಿದ್ದಿರುವುದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.

LEAVE A REPLY

Please enter your comment!
Please enter your name here