ಅಕ್ಷಯ ಕಾಲೇಜಿನಲ್ಲಿ ʼಬ್ಯಾಂಕಿಂಗ್ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿʼ ಮಾಹಿತಿ ಕಾರ್ಯಾಗಾರ

0

ಪುತ್ತೂರು : ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ವತಿಯಿಂದ ದ್ವಿತೀಯ ಮತ್ತು ತೃತೀಯ ಪದವಿ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸ್ಮಾರ್ಟ್ ಕ್ಲಾಸ್ಸಸ್ ಅಕಾಡೆಮಿ ಇದರ ತರಬೇತುದಾರರಾದ ಡಾ.ಸರಸ್ವತಿಯವರು ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸವಾಲುಗಳು ಮತ್ತು ಅದರ ತಯಾರಿಗಳ ಬಗ್ಗೆ ಮಾಹಿತಿ ನೀಡಿದರು.

ತೃತೀಯ ಬಿ.ಕಾಂ ವಿದ್ಯಾರ್ಥಿನಿ ಸಾಕ್ಷಿ ಸ್ವಾಗತಿಸಿ, ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಅಂಜಲಿ ವಂದಿಸಿದರು. ಕಾರ್ಯಾಗಾರದಲ್ಲಿ ಕಾಲೇಜಿನ ಉಪನ್ಯಾಸಕರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here