ಕೋಡಿಂಬಾಳ ರೈಲು ನಿಲ್ದಾಣ ಅಭಿವೃದ್ಧಿ ಪಡಿಸುವಂತೆ ಹೋರಾಟ ಸಮಿತಿಯಿಂದ ಮನವಿ

0

ಕಡಬ: ತಾಲೂಕು ಕೇಂದ್ರವಾದ ಕಡಬದ ಸಮೀಪದವಿರುವ ಕೋಡಿಂಬಾಳ ರೈಲು ನಿಲ್ದಾಣದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಡಬ ತಾಲೂಕು ಕೋಡಿಂಬಾಳ ರೈಲ್ವೇ ನಿಲ್ದಾಣ ಅಭಿವೃಧ್ಧಿ ಹೋರಾಟ ಸಮಿತಿ ಅಧ್ಯಕ್ಷ ಸೈಯದ್ ಮೀರಾ ಸಾಹೇಬ್ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಯಿತು.
ಸೋಮವಾರ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿ ವತಿಯಿಂದ ಅಧಿಕಾರಿಗಳ ಮೂಲಕ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕೋಡಿಂಬಾಳದ ರೈಲು ನಿಲ್ದಾಣಕ್ಕೆ ಮೂಲ ಸೌಕರ್ಯಗಳನ್ನು ಒದಗಿಸಿ ಸಮಗ್ರ ಅಭಿವೃದ್ಧಿ ಪಡಿಸುವಂತೆ, ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ ಮಾಡುವಂತೆ, ಈಗಾಗಲೇ ಇರುವ ಪ್ಯಾಸೆಂಜರ್ ರೈಲು ಮಧ್ಯಾಹ್ನ ಮಾತ್ರ ನೆಟ್ಟಣಕ್ಕೆ ಬರುತ್ತಿದ್ದು, ಇದರಿಂದ ಈ ಭಾಗದ ಜನರಿಗೆ ಅನಾನುಕೂಲವಾಗಿದೆ, ರಾತ್ರಿ ಪುತ್ತೂರಿನಲ್ಲಿ ತಂಗುತ್ತಿರುವ ರೈಲು ಪುತ್ತೂರು ಬದಲಿಗೆ ನೆಟ್ಟಣದಲ್ಲಿ ತಂಗಬೇಕು, ಬೆಳಿಗ್ಗೆ ನೆಟ್ಟಣದಿಂದಲೇ ಮಂಗಳೂರುಗೆ ಹೋದರೆ ಈ ಭಾಗದ ಜನರಿಗೆ ಅನುಕೂಲವಾಗಲಿದೆ ಅಲ್ಲದೆ ಕೋಡಿಂಬಾಳ ರೈಲ್ವೇ ನಿಲ್ದಾಣ ಸಂಪರ್ಕ ರಸ್ತೆಯನ್ನು ಅಭಿವೃದ್ದಿಪಡಿಸುವಂತೆ ಮನವಿ ಸಲ್ಲಿಸಲಾಯಿತು.
ಹೋರಾಟ ಸಮಿತಿ ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್, ಸಂಚಾಲಕ ಫಝಲ್ ಕೋಡಿಂಬಾಳ ಪ್ರಮುಖರಾದ ಪಿ.ಪಿ.ವರ್ಗೀಸ್, ರಾಯ್ ಅಬ್ರಹಾಂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here