
ನೆಲ್ಯಾಡಿ: ಬಜತ್ತೂರು ಗ್ರಾಮದ ಒಡ್ಯಮೆ ಸಮೀಪದ ಕೂವೆಮಠ(ಶಿವತ್ತಮಠ)ದಲ್ಲಿ ಫೆ.26ರಂದು ರಾತ್ರಿ ಶ್ರೀ ರಕ್ತೇಶ್ವರಿ ದೈವದ ನರ್ತನ ಸೇವೆ ನಡೆಯಿತು.
ಕೂವೆಮಠದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನರಸಿಂಹ ಮಠದಲ್ಲಿ ಸಪರಿವಾರ ಶ್ರೀ ನರಸಿಂಹ ದೇವರ ಹಾಗೂ ನಾಗದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ಫೆ.26ರಂದು ಬೆಳಿಗ್ಗೆ ನಡೆಯಿತು. ರಾತ್ರಿ ಶ್ರೀ ರಕ್ತೇಶ್ವರಿ ದೈವದ ಭಂಡಾರ ತೆಗೆದು ನರ್ತನ ಸೇವೆ ನಡೆಯಿತು. ಜೀರ್ಣೋದ್ದಾರ ಸಮಿತಿ ಅಧ್ಯಕ್ಷೆ ವಿಜಯ ಎಂ.ಶೆಟ್ಟಿ ಒಡ್ಯಮೆ ಎಸ್ಟೇಟ್, ಕಾರ್ಯಾಧ್ಯಕ್ಷರಾದ ರಾಧಾಕೃಷ್ಣ ಕೆ.ಎಸ್.ಕುವೆಚ್ಚಾರು, ಉಪಾಧ್ಯಕ್ಷರಾದ ಗುರುಪ್ರಸಾದ ರಾಮಕುಂಜ, ಮಹೇಂದ್ರ ವರ್ಮ ಮೇಲೂರು, ಪ್ರಧಾನ ಕಾರ್ಯದರ್ಶಿ ರಂಜಿತ್ ಜೈನ್ ಮೇಲೂರು, ಕಾರ್ಯದರ್ಶಿ ಚಂದ್ರಶೇಖರ ಶಿವತ್ತಮಠ, ಜೊತೆ ಕಾರ್ಯದರ್ಶಿಗಳಾದ ಮಹೇಶ ಪಾತೃಮಾಡಿ, ಆನಂದ ಮೇಲೂರು, ಕೋಶಾಧಿಕಾರಿ ಶಾಂತಿಪ್ರಕಾಶ್ ಬರ್ನಜಾಲು, ಸದಸ್ಯರು, ವಿವಿಧ ಸಮಿತಿಗಳ ಸಂಚಾಲಕರು, ಸದಸ್ಯರು ಪಾಲ್ಗೊಂಡಿದ್ದರು.