ಪುತ್ತೂರು: ಪುಣಚ ಗ್ರಾಮ ಪಂಚಾಯತ್ನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2023-24ನೇ ಸಾಲಿನ ಹಾಗೂ 15ನೇ ಹಣಕಾಸು ಆಯೋಗದ ಅನುದಾನದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯು ಫೆ.29ರಂದು ಬೆಳಿಗ್ಗೆ 11ಗಂಟೆಗೆ ಗ್ರಾಪಂ ಸಭಾಂಗಣದಲ್ಲಿ ನಡೆಯಲಿದೆ. ಬಂಟ್ವಾಳ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಷಾರವರು ನೋಡೆಲ್ ಅಧಿಕಾರಿಯಾಗಿ ಭಾಗವಹಿಸಲಿದ್ದು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗ್ರಾಪಂ ಅಧ್ಯಕ್ಷೆ ಯಶೋಧ ಯಾನೆ ಬೇಬಿ, ಉಪಾಧ್ಯಕ್ಷ ಮಹೇಶ್ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ರವಿ, ಲೆಕ್ಕಸಹಾಯಕಿ ಪಾರ್ವತಿ ಹಾಗೂ ಸರ್ವ ಸದಸ್ಯರುಗಳು, ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.