ಪುತ್ತೂರು: ಜೈ ಹಿಂದ್ ಸ್ವಿಮ್ಮಿಂಗ್ ಕ್ಲಬ್ ಮಂಗಳೂರು ಆಯೋಜನೆಯಲ್ಲಿ ರಿಯನ್ ಇಂಟರ್ ನ್ಯಾಷನಲ್ ಸ್ಕೂಲ್ ಕುಳಾಯಿ ಇಲ್ಲಿ ನಡೆದ ಇಂಟರ್ ಡಿಸ್ಟ್ರಿಕ್ಟ್ ಏಜ್ ಗ್ರೂಪ್ ಸ್ವಿಮ್ಮಿಂಗ್ ಚಾಂಪಿಯನ್ -2024ರಲ್ಲಿ ಲಾಸ್ಯ ಕಿಶನ್: 100 ಮೀ. ಫ್ರೀ ಸ್ಟೈಲ್‌ನಲ್ಲಿ ಚಿನ್ನ, 50 ಮೀ. ಬಟರ್‌ಫ್ಲೈನಲ್ಲಿ ಚಿನ್ನ, 50 ಮೀ ಬ್ಯಾಕ್‌ಸ್ಟ್ರೋಕ್‌ನಲ್ಲಿ ಚಿನ್ನದ ಪದಕ ಪಡೆದು ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದಿದ್ದಾರೆ. ಲಿಕಿತ್ ರಾಮಚಂದ್ರ: 100ಮೀ. ಫ್ರೀ ಸ್ಟೈಲ್‌ನಲ್ಲಿ ಬೆಳ್ಳಿ 50 ಮೀ. ಬಟರ್ ಫ್ಲೈನಲ್ಲಿ ಚಿನ್ನ, 50 ಮೀ. ಬ್ರೆಸ್ಟ್‌ಸ್ಟ್ರೋಕ್‌ನಲ್ಲಿ ಬೆಳ್ಳಿ ಪದಕ ಪಡೆದು ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದಿದ್ದಾರೆ. ಅನಿಕಾ ಯು.: 50 ಮೀ. ಬಟರ್ ಫ್ಲೈನಲ್ಲಿ ಬೆಳ್ಳಿಯ ಪದಕ ಪಡೆದಿದ್ದಾರೆ. ವರ್ಧಿನ್ ಡಿ. ರೈ: 50 ಮೀ. ಬಟರ್ ಫ್ಲೈನಲ್ಲಿ ಬೆಳ್ಳಿ, 50 ಮೀ. ಫ್ರೀ ಸ್ಟೈಲ್‌ನಲ್ಲಿ ಕಂಚು, 50 ಮೀ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಪ್ರತ್ಯುಷ್ ಎಲ್.ಎಸ್.ಗೌಡ: 50 ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ಅಮೋಘ್: 25 ಮೀ. ಬ್ಯಾಕ್ ಸ್ಟ್ರೋಕ್‌ನಲ್ಲಿ ಬೆಳ್ಳಿ, 25 ಮೀ. ಫ್ರೀಸ್ಟೈಲ್‌ನಲ್ಲಿ ಬೆಳ್ಳಿ,25 ಮೀ. ಕಿಕ್‌ಬೋರ್ಡ್‌ನಲ್ಲಿ ಚಿನ್ನದ ಪದಕ ಪಡೆದು ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದಿದ್ದಾರೆ. ರಾಹೀ: ಬಿ.25 ಮೀ. ಕಿಕ್‌ಬೋರ್ಡ್‌ನಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಅಗಸ್ತ್ಯ: 25 ಮೀ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಅಸ್ತಾ ಎ.: 25 ಮೀ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಕಂಚು, 25 ಮೀ ಬ್ಯಾಕ್ ಸ್ಟ್ರೋಕ್‌ನಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ತ್ರಾಯಿ ಭಟ್: 25 ಮೀ ಬ್ಯಾಕ್ ಸ್ಟ್ರೋಕ್‌ನಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ಇಶಾನ್ ಪಿ. ಹೆಗ್ಡೆ 50 ಮೀ. ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಕಂಚಿನ ಪದಕ ಪಡೆದಿದ್ದಾರೆ. ಇವರು ಪುತ್ತೂರು ಶಿವರಾಮ ಕಾರಂತ ಬಾಲವನದ ಈಜುಕೊಳದಲ್ಲಿ ಅಕ್ವಾಟಿಕ್ ಕ್ಲಬ್‌ನ ಪಾರ್ಥ ವಾರಣಾಸಿ, ನಿರೂಪ್ ಜಿ.ಆರ್, ದೀಕ್ಷಿತ್, ರೋಹಿತ್ ಇವರಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.