ನರಿಮೊಗರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸತೀಶ್ ಕುಮಾರ್ ಕೆಡೆಂಜಿ, ಉಪಾಧ್ಯಕ್ಷರಾಗಿ ಪದ್ಮಾವತಿ ಆಯ್ಕೆ

0

ಪುತ್ತೂರು: ನರಿಮೊಗರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯ ಫಲಿತಾಂಶ ಘೋಷಣೆಯಾಗಿದ್ದು, ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸತೀಶ್ ಕುಮಾರ್ ಕೆಡೆಂಜಿ, ಉಪಾಧ್ಯಕ್ಷರಾಗಿ ಪದ್ಮಾವತಿರವರು ಆಯ್ಕೆಯಾಗಿದ್ದಾರೆ.


ನಿರ್ದೇಶಕರುಗಳಾಗಿ ಗಣೇಶ್ ಸಾಲ್ಯಾನ್ ಪಜಿಮಣ್ಣು, ದಾಮೋದರ್ ಪೂಜಾರಿ ಕೆ.ಕರ್ಪುತ್ತಮೂಲೆ, ಎಚ್.ಅಣ್ಣಿ ಪೂಜಾರಿ ಹಿಂದಾರು, ಜಯಂತ್ ಪೂಜಾರಿ ಕೆ.ಕೊಡಂಗೆ, ಉದಯ ಕುಮಾರ್ ಕೋಲಾಡಿ, ಸಂತೋಷ್ ಕುಮಾರ್ ಮರಕ್ಕೂರ್, ಗೀತಾ ಕೆ.ಕುರೆಮಜಲುರವರು ಆಯ್ಕೆಯಾಗಿದ್ದಾರೆ ಎಂದು ರಿಟರ್ನಿಂಗ್ ಆಫೀಸರ್ ಶೋಭಾ ಎನ್.ಎಸ್‌ರವರು ಅಧಿಕೃತವಾಗಿ ತಿಳಿಸಿರುತ್ತಾರೆ.


ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ್ ಕುಮಾರ್ ಕೆಡೆಂಜಿರವರು ಕುದ್ಮಾರು ಗ್ರಾಮದ ಕೆಡೆಂಜಿಗುತ್ತು ನಿವಾಸಿಯಾಗಿದ್ದು, ಪ್ರಸ್ತುತ ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾಗಿ, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾಗಿ, ನರಿಮೊಗರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ, ಕೆಪಿಸಿಸಿ ಸದಸ್ಯರಾಗಿ, ದ.ಕ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರಾಗಿ, ಕುದ್ಮಾರು ಹಿ.ಪ್ರಾ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ, ಜಿಲ್ಲಾ ಕೆಡಿಪಿ ಸದಸ್ಯರಾಗಿ, ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹಾಗೂ ಕುದ್ಮಾರು ಹಿ.ಪ್ರಾ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿಯೂ ಇವರು ಸೇವೆ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here