ಮಾ.1: ಪುಣಚ ಮಹಿಷಮರ್ದಿನಿ ದೇವಿ ಭಜನಾ ಮಂಡಳಿಯ ಭಜನಾ ವಾರ್ಷಿಕೋತ್ಸವ

0

ಪುಣಚ : ಪುಣಚ ಮಹಿಷಮರ್ದಿನಿ ದೇವಿ ಭಜನಾ ಮಂಡಳಿಯ 42ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ವರ್ಕಾಡಿ ಗಣೇಶ ತಂತ್ರಿಯವರ ಮಾರ್ಗದರ್ಶನದಲ್ಲಿ ಭಜನಾ ಕಾರ್ಯಕ್ರಮವು ಮಾ.1ರಂದು ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಲಿದೆ.


ಮಾ.1ರಂದು ಬೆಳಿಗ್ಗೆ ಭಜನಾ ಮಂಡಳಿಯ ಮಾಜಿ ಅಧ್ಯಕ್ಷ ಶ್ರೀಧರ್ ಶೆಟ್ಟಿ ಬೈಲುಗುತ್ತು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಎಸ್.ಆರ್.ರಂಗಮೂರ್ತಿ, ಉಪಾಧ್ಯಕ್ಷ ಮಾರಪ್ಪ ಶೆಟ್ಟಿ ಬೈಲುಗುತ್ತು, ಕೋಶಾಧಿಕಾರಿ ಶಂಕರನಾರಾಯಣ ಭಟ್ ಮಲ್ಯ, ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣ ಬನ್ನಿಂತಾಯ ಭಾಗವಹಿಸಲಿದ್ದಾರೆ. ಬೆಳಿಗ್ಗೆ ಮಹಾಗಣಪತಿ ಹೋಮ, ವಿವಿಧ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಹೂವಿನ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ.ರಾತ್ರಿ ರಂಗ ಪೂಜೆ ನಡೆದು ಪ್ರಸಾದ ವಿತರಣೆ ನಡೆಯಲಿದೆ ಎಂದು ಭಜನಾ ಮಂಡಳಿಯ ಅಧ್ಯಕ್ಷ ಕಿರಣ್ ಚಂದ್ರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here