ಪಾಲ್ತಾಡಿ ಗ್ರಾಮದಲ್ಲಿ ರಸ್ತೆ ಕಾಮಗಾರಿ ಉದ್ಘಾಟಿಸಿದ ಶಾಸಕಿ ಭಾಗೀರಥಿ ಮುರುಳ್ಯ

0

ಸವಣೂರು: ಪಾಲ್ತಾಡಿ ಗ್ರಾಮದ ಬಂಬಿಲ‌ ಮಹಮ್ಮಾಯಿ ಮಾರಿಯಮ್ಮ ದೇವಸ್ಥಾನದ ಸಂಪರ್ಕ ರಸ್ತೆ (10 ಲಕ್ಷ) ಹಾಗೂ ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಪರ್ಕ ರಸ್ತೆಯ ಅಭಿವೃದ್ಧಿ (10 ಲಕ್ಷ) ಕಾಮಗಾರಿಯನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಫೆ.29ರಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್.,ಸದಸ್ಯರಾದ ಚಂದ್ರಾವತಿ ಸುಣ್ಣಾಜೆ, ಸತೀಶ್ ಅಂಗಡಿಮೂಲೆ, ವಿನೋದಾ ರೈ ,ಹರಿಕಲಾ ರೈ ,ಶೀನಪ್ಪ ಶೆಟ್ಟಿ ನೆಕ್ರಾಜೆ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ ,ಸವಣೂರು ಸಿಎ ಬ್ಯಾಂಕ್ ಅಧ್ಯಕ್ಷ ತಾರಾನಾಥ ಕಾಯರ್ಗ, ಪಾಲ್ತಾಡಿ ಶಕ್ತಿ ಕೇಂದ್ರ ಪ್ರಮುಖ್ ಮಹೇಶ್ ಕೆ.ಸವಣೂರು, ಚೈತನ್ಯ ರೈತಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ, ಪಾಲ್ತಾಡಿ ಬೂತ್ 70ರ ಅಧ್ಯಕ್ಷ ಪ್ರಸಾದ್ ರೈ ಬೈಲಾಡಿ ,ಗ್ರಾ.ಪಂ.ಮಾಜಿ ಸದಸ್ಯರಾದ ಬಾಳಪ್ಪ ಪೂಜಾರಿ ಮೊದಲಾದವರಿದ್ದರು.

ಸವಣೂರು ಗ್ರಾ.ಪಂ.ಮಾಜಿ ಅಧ್ಯಕ್ಷೆ ಇಂದಿರಾ ಬಿ.ಕೆ.ಅವರು ಸ್ವಾಗತಿಸಿ,ವಂದಿಸಿದರು.

LEAVE A REPLY

Please enter your comment!
Please enter your name here