ಮಾ.2: ಶ್ರೀ ಕ್ಷೇತ್ರ ದೈಪಿಲ ಕ್ರೀಡಾ ಸೇವಾ ಸಂಘದಿಂದ ಹೊನಲು ಬೆಳಕಿನ ಮಹಾ ಹಗ್ಗಜಗ್ಗಾಟ, ಮನೋರಂಜನಾ ಕ್ರೀಡೆ

0

ಕಾಣಿಯೂರು: ಶ್ರೀ ಕ್ಷೇತ್ರ ದೈಪಿಲ ಕ್ರೀಡಾ ಸೇವಾ ಸಂಘದ ನೇತೃತ್ವದಲ್ಲಿ ತಾಲೂಕು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು ಇವರ ಸಹಯೋಗದಲ್ಲಿ 4ನೇ ವರ್ಷದ ಅಂತರ್‌ರಾಜ್ಯ ಮತ್ತು ಕಾಲೇಜು ಹಾಗೂ ವಲಯ ಮಟ್ಟದ ಹೊನಲು ಬೆಳಕಿನ ಮಹಾ ಹಗ್ಗಜಗ್ಗಾಟ ಮತ್ತು ಮನೋರಂಜನಾ ಕ್ರೀಡೆ ಮಾ.2ರಂದು ದೈಪಿಲ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಕ್ರೀಡೋತ್ಸವವನ್ನು ಚಂದ್ರಕಲಾ ಜಯರಾಮ ಅರುವಗುತ್ತು ಉದ್ಘಾಟಿಸಲಿದ್ದಾರೆ. ದೈಪಿಲ ಕ್ರೀಡಾ ಸೇವಾ ಸಂಘದ ಅಧ್ಯಕ್ಷ ರಾಜೇಶ್ ಖಂಡಿಗ ಅಧ್ಯಕ್ಷತೆ ವಹಿಸಲಿದ್ದಾರೆ. ವಚನಾ ಪ್ರದೀಪ್ ಅರುವಗುತ್ತು, ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೇಮಣ್ಣ ಗೌಡ ಅಂಬುಲ, ದೈಪಿಲ ಕ್ರೀಡಾ ಸೇವಾ ಸಂಘದ ಗೌರವಾಧ್ಯಕ್ಷ ಮೋಹನ್ ಕೆ.ಪಿ.ರಾಮುಡೇಲು, ಕೃಷಿಕ ಕೃಷ್ಣಪ್ಪ ಕೆಳಗಿನಕೇರಿ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ರಾತ್ರಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ದೈಪಿಲ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರದೀಪ್ ಆರ್ ಗೌಡ ಮೈಸೂರು ಅಧ್ಯಕ್ಷತೆ ವಹಿಸಲಿದ್ದಾರೆ. ಕಡಬ ಆರಕ್ಷಕ ಠಾಣೆಯ ಪೋಲಿಸ್ ಉಪನಿರೀಕ್ಷಕ ಅಭಿನಂದನ್ ಎಂ.ಎಸ್, ಬೆಂಗಳೂರು ನ್ಯಾಯವಾದಿ ಮೋಹನ ಗೌಡ ಇಡ್ಯಡ್ಕ, ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ, ಚಾರ್ವಾಕ ಕುಮಾರಧಾರ ಫಾರ್ಮ್ಸ್ನ ವಿಜಯಕುಮಾರ್ ಸೊರಕೆ, ಮುರ್ಡೇಶ್ವರ ಜಲವಿಜಯ ಬೋಟ್‌ನ ಶಂಭುನಾರಾಯಣ ಖಾರ್ವಿ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ ಎಣ್ಮೂರುಗುತ್ತು, ಶರಣ್, ಹೋಟೆಲ್ ಸುರಭಿ ಗ್ರೂಪ್‌ನ ಅಧ್ಯಕ್ಷ ನವೀತ್ ಶೆಟ್ಟಿ, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಕಾಣಿಯೂರು ಗ್ರಾ.ಪಂ.ಅಧ್ಯಕ್ಷ ವಿಶ್ವನಾಥ ಕೊಪ್ಪ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ರವಿ ಕಟಪಾಡಿ ಉಡುಪಿ, ಈಶ್ವರ್ ಮಲ್ಪೆ ಉಡುಪಿಯವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ದೈಪಿಲ ಕ್ರೀಡಾ ಸೇವಾ ಸಂಘದ ಗೌರವಾಧ್ಯಕ್ಷ ಮೋಹನ್ ಕೆ.ಪಿ.ರಾಮುಡೇಲು ಅಧ್ಯಕ್ಷತೆ ವಹಿಸಿದ್ದಾರೆ. ದೈಪಿಲ ಕ್ರೀಡಾ ಸೇವಾ ಸಂಘದ ಮಾಜಿ ಅಧ್ಯಕ್ಷ ಹರೀಶ್ ಕೆಳಗಿನಕೇರಿ, ಆನಂದ ಖಂಡಿಗ, ಧರ್ಣಪ್ಪ ಗೌಡ ಅಂಬುಲ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾತ್ರಿ ಮನೋರಂಜನಾ ಕಾರ್ಯಕ್ರಮದಲ್ಲಿ ವಿಠಲ ನಾಯಕ್ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ ಎಂದು ಸಂಘದ ಗೌರವಾಧ್ಯಕ್ಷ ಮೋಹನ್ ಕೆ.ಪಿ.ರಾಮುಡೇಲು, ಅಧ್ಯಕ್ಷ ರಾಜೇಶ್ ಖಂಡಿಗ, ಪ್ರಧಾನ ಕಾರ್ಯದರ್ಶಿ ನಾಗೇಶ್ ಖಂಡಿಗ, ಕಾರ್ಯಕ್ರಮದ ಸಂಚಾಲಕ ಬೆಳಿಯಪ್ಪ ಗೌಡ ದೇವಸ್ಯ, ಕೋಶಾಧಿಕಾರಿ ವಿಜಯ ಬೈಲು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here