ವಿಟ್ಲ:ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮಾಣಿ ಸ್ಥಳೀಯ ಸಂಸ್ಥೆ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಇದರ ಸಹಭಾಗಿತ್ವದಲ್ಲಿ ಫೆ. 28 ರಂದು ಮಾಣಿ ಪೆರಾಜೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2023-24 ನೇ ಸಾಲಿನ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ ನಡೆಯಿತು.
ಸಂಸ್ಥೆಯ ಸಂಚಾಲಕರು, ಮಾಣಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ. ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪರೀಕ್ಷಾ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಎಳವೆಯಲ್ಲಿಯೇ ವಿದ್ಯಾರ್ಥಿಗಳಿಗೆ ನಾಯಕತ್ವ ಗುಣವಿದ್ದಾಗ ಮುಂದಿನ ದಿನಗಳಲ್ಲಿ ಸದೃಢ ದೇಶ ಕಟ್ಟಬಲ್ಲರು ಎಂದರು.
ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ರವೀಂದ್ರ ಡಿ ಸ್ವಾಗತಿಸಿ,ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ. ವಂದಿಸಿದರು.ಕಾರ್ಯಕ್ರಮದಲ್ಲಿ ಕಬ್ ವಿಭಾಗದ ಶಿಬಿರ ನಾಯಕಿ ಯಮುನಾ,ಬುಲ್ ಬುಲ್ ವಿಭಾಗದ ಶಿಬಿರ ನಾಯಕಿ ಯಶೋಧ ಕೆ (HWB) ರವರು ಉಪಸ್ಥಿತರಿದ್ದರು.
ಪರೀಕ್ಷಾ ಶಿಬಿರದಲ್ಲಿ ಸಹಾಯಕರಾಗಿ ಕಬ್ ಮಾಸ್ಟರ್ ಮತ್ತು ಫ್ಲಾಕ್ ಲೀಡರ್ ಗಳಾದ ಕಾಂತಪ್ಪ, ಸುಮಾ,ಅಮಿತಾ ಎಸ್,ಪ್ರಮೀಳಾ, ಕುರ್ಶಿದ, ಯೋಗಿನಿ, ಚಿತ್ರ ಕೆ, ವೀಣಾ, ಶೀಲಾವತಿ, ಪ್ರಮೀಳಾ ಕ್ರಾಸ್ತಾ, ಸೌಮ್ಯ ಹಾಗೂ ಸ್ಕೌಟ್ & ಗೈಡ್ ಶಿಕ್ಷಕರಾದ ಸಪ್ನ,ಅನಿತಾ ಗೌರಿ,ಲೀಲಾರವರು ಸಹಕರಿಸಿದರು.ಕಬ್ ವಿಭಾಗದಲ್ಲಿ 77 ವಿದ್ಯಾರ್ಥಿಗಳು ಹಾಗೂ ಬುಲ್ ಬುಲ್ ವಿಭಾಗದಲ್ಲಿ 66 ವಿದ್ಯಾರ್ಥಿಗಳು ಸೇರಿ ಒಟ್ಟು 143 ವಿದ್ಯಾರ್ಥಿಗಳು ಪರೀಕ್ಷಾ ಶಿಬಿರದಲ್ಲಿ ಭಾಗವಹಿಸಿದ್ದರು.ಸ್ವಯಂ ಸೇವಕರಾಗಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿಯ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಸಹಕರಿಸಿದರು.ಗೈಡ್ ಕ್ಯಾಪ್ಟನ್ ಸುಪ್ರಿಯಾ ಡಿ ಕಾರ್ಯಕ್ರಮ ನಿರೂಪಿಸಿದರು.