ಸವಣೂರು : ಸವಣೂರು ಗ್ರಾ.ಪಂ.ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮತ್ತು 15ನೇ ಹಣಕಾಸು ಯೋಜನೆಯ ಅನುದಾನದ 2022-23ನೇ ಸಾಲಿನ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ಫೆ.29ರಂದು ಗ್ರಾ.ಪಂ.ನ ಕುಮಾರಧಾರಾ ಸಭಾಂಗಣದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್ ವಹಿಸಿ ಸಭೆಯನ್ನು ನಡೆಸಿಕೊಟ್ಟರು.
ಸಾಮಾಜಿಕ ಪರಿಶೋಧನೆಯ ತಾಲೂಕು ಸಂಯೋಜಕ ಚಂದ್ರಶೇಖರ ವಿ. ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಲ್ಲಿ ಸುಮಾರು 80 ಲಕ್ಷಕ್ಕೂ ಅಧಿಕ ಮೊತ್ತದ ಕಾಮಗಾರಿ ನಡೆದಿದೆ.ಇದು ತಾಲೂಕಿನಲ್ಲಿ 2ನೇ ಸ್ಥಾನ ಪಡೆದುಕೊಂಡ ಹೆಗ್ಗಳಿಕೆ. ಸಾಮಾಜಿಕ ಪರಿಶೋಧನೆಯಲ್ಲಿ ಕಂಡು ಬಂದ ನ್ಯೂನತೆಗಳನ್ನು ಸರಿಪಡಿಸಿಕೊಂಡು ಯೋಜನೆಯ ಯಶಸ್ವಿ ಅನುಷ್ಠಾನಗೊಳಿಸಬೇಕು ಎಂದರು.
ವೇದಿಕೆಯಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್, ಉಪಾಧ್ಯಕ್ಷೆ ಜಯಶ್ರೀ ,ಅಭಿವೃದ್ಧಿ ಅಧಿಕಾರಿ ಸಂದೇಶ್ ಕೆ.ಎನ್., ತಾಂತ್ರಿಕ ಅಭಿಯಂತರ ಮನೋಜ್ ಕುಮಾರ್ ಉಪಸ್ಥಿತರಿದ್ದರು.
ಸಭೆಯಲ್ಲಿ ಗ್ರಾ.ಪಂ.ಸದಸ್ಯರಾದ ರಾಜೀವಿ ಶೆಟ್ಟಿ ,ಗಿರಿಶಂಕರ ಸುಲಾಯ, ಸತೀಶ್ ಅಂಗಡಿಮೂಲೆ, ಭರತ್ ರೈ ಪಾಲ್ತಾಡಿ ,ಸಿಬಂದಿಗಳಾದ ಪ್ರಮೋದ್ ಕುಮಾರ್ ,ದಯಾನಂದ ಎಂ.,ಯತೀಶ್ ,ಜಯಶ್ರೀ ,ಜಯಾ .ಕೆ, ಶಾರದಾ ಎಂ. ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.ಗ್ರಾ.ಪಂ.ಲೆಕ್ಕ ಸಹಾಯಕ ಎ.ಮನ್ಮಥ ವಂದಿಸಿದರು.