





ಪುತ್ತೂರು: ಹಿರಿಯ ಪತ್ರಕರ್ತರಾದ ಮನೋಹರ್ ಪ್ರಸಾದ್ ಅವರು ಮಾ.1 ರಂದು ಮುಂಜಾನೆ ನಿಧನ ಹೊಂದಿದ್ದಾರೆ.ಪುತ್ತೂರು ಚೇತನಾ ಆಸ್ಪತ್ರೆಯ ಡಾ.ಶ್ರೀಕಾಂತ್ ರಾವ್ ಅವರ ಹತ್ತಿರ ಸಂಬಂಧಿಯಾಗಿರುವ ಮನೋಹರ್ ಪ್ರಸಾದ್ ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರು. ಅವರು ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿ ನಿವೃತ್ತಿ ಹೊಂದಿದ್ದರು. ಟಿ ವಿ ಮಾಧ್ಯಮಗಳಲ್ಲೂ ಉದ್ಘೋಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.











