ನೆಲ್ಯಾಡಿ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (ಆರ್.ಡಿ.ಪಿ.ಆರ್) ರಾಜ್ಯ ಸಮಿತಿ ಬೆಂಗಳೂರು ಇವರ ಕರೆಯಂತೆ ಗ್ರಾಮ ಪಂಚಾಯತ್ ನೌಕರರ ಮೂಲ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಶಿರಾಡಿ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮಾ .1ರಂದು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿ ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಏಲಿಯಾಸ್ ಕೆ.ಸಿ., ರಮ್ಯ ವೈ.ಸಿ. ಸ್ಮಿತಾ ಮನೋಜ್ ಹಾಗೂ ತೋಮಸ್ ವಿ.ಎ., ಅವರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಣೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.