ಗೋಳಿತ್ತೊಟ್ಟು ಗ್ರಾಮ ಪಂಚಾಯತ್ ನೌಕರರಿಂದ ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಣೆ

0

ನೆಲ್ಯಾಡಿ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (ಆರ್.ಡಿ.ಪಿ.ಆರ್) ರಾಜ್ಯ ಸಮಿತಿ ಬೆಂಗಳೂರು ಇವರ ಕರೆಯಂತೆ ಗ್ರಾಮ ಪಂಚಾಯತ್ ನೌಕರರ ಮೂಲ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಗೋಳಿತ್ತೊಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮಾ.1 ರಂದು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿ ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಪುಷ್ಪಾ ಜಯಂತ್, ಬಾಬು ನಾಯ್ಕ, ದಿನೇಶ್ ಹಾಗೂ ಯಶವಂತ ಅವರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಣೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

LEAVE A REPLY

Please enter your comment!
Please enter your name here