ಪುತ್ತೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯದಾದ್ಯಂತ ನಡೆಯುತ್ತಿರುವ ಗ್ರಾಮ ಪಂಚಾಯತ್ ನೌಕರರ ಮುಷ್ಕರಕ್ಕೆ ಬೆಂಬಲ ಸೂಚಿಸಿ ಕೆಯ್ಯೂರು ಗ್ರಾಪಂ ಸಿಬ್ಬಂದಿಗಳು ಮಾ.1 ರಂದು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುವ ಮೂಲಕ ಕರ್ತವ್ಯ ನಿರ್ವಹಿಸಿದರು. ಗ್ರಾಪಂ ಸಿಬ್ಬಂದಿಗಳಾದ ಶಿವಪ್ರಸಾದ್, ರಾಕೇಶ್, ಮಾಲತಿ, ಧರ್ಮಣ್ಣರವರುಗಳು ಕೈಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು.