Inspire Award ಸ್ಪರ್ಧೆ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ನಿಕ್ಷೇಪ ಆರ್ ರೈ ರಾಜ್ಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಭಾರತ ಸರಕಾರದ ಅಧೀನದಲ್ಲಿರುವ ವಿಜ್ಞಾನ ಹಾಗೂ ತಂತ್ರಜ್ಞಾನ ವಿಭಾಗ ಸಂಸ್ಥೆ ವಿಜ್ಞಾನ ಹಾಗೂ ತಂತ್ರಜ್ಞಾನದ ಪ್ರಗತಿಗೋಸ್ಕರ ಮತ್ತು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಕ್ರಿಯೆಯಲ್ಲಿ ವೈಜ್ಞಾನಿಕ ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೆಪಿಸಲು ಇನ್‌ಸ್ಪಾಯರ್ [Inspire Award] ಸ್ಪರ್ಧೆಯನ್ನು ಆಯೋಜಿಸಿತ್ತು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಇಲ್ಲಿನ 8ನೇ ತರಗತಿ ವಿದ್ಯಾರ್ಥಿನಿ ನಿಕ್ಷೇಪ ಆರ್ ರೈ ಇವರು ರಚಿಸಿದ “Automatic Fire Fighting Robot” ಎಂಬ ವಿಜ್ಞಾನ ಮಾದರಿಯು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನಿಕ್ಷೇಪ ಆರ್ ರೈ ಇವರು ರಮೇಶ್ ರೈ ಮತ್ತು ಶ್ರೀಲತ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here