ಕೃಷಿ ಯಾಂತ್ರೀಕರಣ ಯೋಜನೆಯಡಿ ಅರ್ಜಿ ಅಹ್ವಾನ

0

ಪುತ್ತೂರು: ಕೃಷಿ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳಿಗೆ ಶೇಕಡಾ 50% ಸಹಾಯಧನದಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.


ಕೃಷಿ ಯಂತ್ರೋಪಕರಣಗಳಲ್ಲಿ ಮಿನಿ ಟ್ರಾಕ್ಟರ್, ಪವರ್ ಟಿಲ್ಲರ್, ಹುಲ್ಲು ಕತ್ತರಿಸುವ ಯಂತ್ರ, ಮದ್ದು ಸಿಂಪಡಿಸುವ ಯಂತ್ರ ಹಾಗೂ ಚಾಫ್ ಕಟ್ಟರ್ ಉಪಕರಣಗಳಿಗೆ ಸಹಾಯಧನವನ್ನು ನೀಡಲಾಗುವುದು. ಆಸಕ್ತ ರೈತರು ಆಧಾ‌ರ್ ಕಾರ್ಡ್, ಪಹಣಿ, ರೂ.20/- ಛಾಪ ಕಾಗದ (ನೋಟರಿಯೊಂದಿಗೆ) ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿಗಳೊಂದಿಗೆ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಸಹಾಯಕ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here