ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಳೆ ವಿದ್ಯಾರ್ಥಿನಿ ಶ್ರೀಮತಿ ಪೂರ್ಣಿಮಾ ರವಿ ಅವರು ನಿರ್ದೇಶಿಸಿರುವ “ಗಾಡ್ಸ್ ವೈಫ್ಸ್ ಮೆನ್ಸ್ ಸ್ಲೇವ್ಸ್”, ದೇವದಾಸಿಯರ ಅಂತ್ಯವಿಲ್ಲದ ಕಥೆಗಳ ಕುರಿತ ಸಾಕ್ಷ್ಯಚಿತ್ರ ಅಮೆರಿಕಾದ ಪ್ರತಿಷ್ಠಿತ ಇಂಪ್ಯಾಕ್ಟ್ ಡಾಕ್ಸ್ ಪ್ರಶಸ್ತಿಗೆ ಆಯ್ಕೆಯಾಗಿದೆ.
ಅವಾರ್ಡ್ ಆಫ್ ರೆಕಗ್ನಿಷನ್ ವಿಭಾಗದಲ್ಲಿ ಈ ಸಾಕ್ಷ್ಯಚಿತ್ರಕ್ಕೆ ಪ್ರಶಸ್ತಿ ದೊರೆತಿದೆ.

ಚಲನಚಿತ್ರ ನಿರ್ದೇಶಕಿ ಪೂರ್ಣಿಮಾ ರವಿ ಅವರು ಮಂಗಳೂರು ವಿಶ್ವವಿದ್ಯಾಲಯದ ಆಂಗ್ಲ ಭಾಷಾ ವಿಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದು, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಇಲ್ಲಿನ ಆಂಗ್ಲ ಭಾಷಾ ಸಹ ಪ್ರಾಧ್ಯಾಪಕಿ ನಯನಾ ಕಾಶ್ಯಪ್ ಅವರ ಮಾರ್ಗದರ್ಶನದಲ್ಲಿ ತಮ್ಮ ಪಿ ಎಚ್ ಡಿ ಅಧ್ಯಯನ ನಡೆಸುತ್ತಿದ್ದಾರೆ. ಅವರು ಪ್ರಸ್ತುತ ಪುತ್ತೂರಿನ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.