ನಿಡ್ಪಳ್ಳಿ: ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

0

ನಿಡ್ಪಳ್ಳಿ: ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ನಿಡ್ಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಾ.3 ರಂದು ಬೆಳಿಗ್ಗೆ ಚಾಲನೆ ನೀಡಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ತಂಬುತ್ತಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸಭಾಭವನದ ಬೂತಿನಲ್ಲಿ ಮಗುವಿಗೆ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ಪಂಚಾಯತ್ ಸದಸ್ಯ ಸತೀಶ್ ಶೆಟ್ಟಿ, ಆರೋಗ್ಯ ಇಲಾಖೆಯ ಕಾರ್ಯಕರ್ತೆ ಲಕ್ಷ್ಮೀ, ಆಶಾ ಕಾರ್ಯಕರ್ತೆ ಪವಿತ್ರ, ಪಂಚಾಯತ್ ಸಿಬ್ಬಂದಿ ಸಂಶೀನಾ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here