ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ – ಶಶಿಕುಮಾರ್ ರೈ ಬಾಲ್ಯೊಟ್ಟು ಅವಿರೋಧ ಆಯ್ಕೆ ಖಚಿತ – ಸತತ 3ನೇ ಬಾರಿಗೆ ಆಯ್ಕೆಯಾದ ಶಶಿಕುಮಾರ್ ರೈ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ ಒಟ್ಟು 16 ಸ್ಥಾನಗಳ ಪೈಕಿ 15 ಸ್ಥಾನಗಳಿಗೂ ತಲಾ ಒಂದು ನಾಮಪತ್ರಗಳು ಸಲ್ಲಿಕೆಯಾಗಿದ್ದು ಪುತ್ತೂರಿನಿಂದ ಶಶಿಕುಮಾರ್ ರೈ ಬಾಲ್ಯೊಟ್ಟು ಸೇರಿದಂತೆ 15 ಮಂದಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸಲು ಮಾ.3 ಅಂತಿಮ ದಿನವಾಗಿದ್ದು ಒಟ್ಟು 16 ಸ್ಥಾನಗಳ ಪೈಕಿ 15 ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿದೆ. ಪುತ್ತೂರಿನಿಂದ ಹಾಲಿ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಸುಳ್ಯದಿಂದ ಎಸ್.ಎನ್ ಮನ್ಮಥ, ಬೆಳ್ತಂಗಡಿಯಿಂದ ಕುಶಾಲಪ್ಪ ಗೌಡ ಪೂವಾಜೆ, ಬಂಟ್ವಾಳದಿಂದ ಟಿ.ಜಿ ರಾಜಾರಾಮ ಭಟ್, ಮಂಗಳೂರಿನಿಂದ ಹಾಲಿ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್, ಭಾಸ್ಕರ ಕೋಟ್ಯಾನ್, ವಾದಿರಾಜ ಶೆಟ್ಟಿ, ವಿನಯ ಕುಮಾರ್ ಸೂರಿಂಜೆ, ಉಡುಪಿಯಿಂದ ದೇವಿಪ್ರಸಾದ್ ಶೆಟ್ಟಿ, ಅಶೋಕ್ ರೈ, ಕುಂದಾಪುರದಿಂದ ರಾಜೀವ ಪೂಜಾರಿ, ಮಹೇಶ್ ಹೆಗ್ಡೆ, ಟಿಎಪಿಟಿಎಂಎಸ್‌ನಿಂದ ಮೋನಪ್ಪ ಶೆಟ್ಟಿ ಎಕ್ಕಾರು, ಕ್ರೆಡಿಟ್ ಸಹಕಾರಿಯಿಂದ ಜಯರಾಜ್ ರೈ ಮಾತ್ರವೇ ನಾಮಪತ್ರ ಸಲ್ಲಿಸಿದ್ದು ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.
ಬಾಕಿಯಿರುವ ಇತರ ಕ್ಷೇತ್ರಕ್ಕೆ ಹಾಲಿ ನಿರ್ದೇಶಕ ಪುತ್ತೂರಿನ ಎಸ್.ಬಿ ಜಯರಾಮ ರೈ ಹಾಗೂ ಬಂಟ್ವಾಳ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಾಮಪತ್ರ ಸಲ್ಲಿಸಿದ್ದಾರೆ.
ಶಶಿಕುಮಾರ್ ರೈ 3ನೇ ಬಾರಿಗೆ ಆಯ್ಕೆ
ಪುತ್ತೂರು ಕ್ಷೇತ್ರದಿಂದ ಮೂರನೇ ಬಾರಿಗೆ ಆಯ್ಕೆಯಾಗಿರುವ ಶಶಿ ಕುಮಾರ್ ರೈ ಬಾಲ್ಯೊಟ್ಟು ಸತತ 3ನೇ ಬಾರಿಗೆ ಆಯ್ಕೆಯಾದವರಲ್ಲಿ ಪ್ರಥಮರಾಗಿದ್ದಾರೆ. ಈ ಹಿಂದೆ ದಿ. ಜೀವನ್ ಭಂಡಾರಿ ಹಾಗೂ ಸವಣೂರು ಸೀತಾರಾಮ ರೈಯವರು ಎರಡು ಬಾರಿ ಆಯ್ಕೆಯಾಗಿದ್ದರು.

LEAVE A REPLY

Please enter your comment!
Please enter your name here