ಪುತ್ತೂರು: ಇನ್ನೇನು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ಕಡಬದ ವಿದ್ಯಾರ್ಥಿನಿಯರ ಮೇಲೆ ಅಬೀನ್ ಎಂಬಾತನಿಂದ ಆ್ಯಸಿಡ್ ದಾಳಿ ನಡೆದಿರುವುದು ನಾಗರಿಕ ಸಮಾಜವೇ ತಲೆತಗ್ಗಿಸುವ ವಿಷಯಾಗಿದೆ ಇದನ್ನು ಪುತ್ತಿಲ ಪರಿವಾರ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಅಲೀನಾ, ಅರ್ಚನ, ಅಮೃತ ಎನ್ನುವ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಅಬೀನ್ ಎಂಬಾತ ಆ್ಯಸಿಡ್ ದಾಳಿ ನಡೆಸಿದ್ದಾನೆ. ಒಬ್ಬಾಕೆ ಗಂಭೀರವಾಗಿ ಗಾಯಗೊಂಡಿದ್ದಾರೆ.ಸಿದ್ದರಾಮಯ್ಯ ಸರ್ಕಾರದ ಅತಿಯಾದ ಅಲ್ಪಸಂಖ್ಯಾತ ಓಲೈಕೆಯಿಂದ ಭಯವೇ ಇಲ್ಲದಂತಾಗಿದೆ.
ದಕ್ಷಿಣ ಕನ್ನಡದಲ್ಲಂತು ಗಾಂಜಾ, ಕಳ್ಳತನ, ಕೊಲೆ ಪ್ರಕರಣಗಳು, ತಲುವಾರು ದಾಳಿಗಳು, ಲವ್ ಜಿಹಾದ್, ಗೋವು ಕಳ್ಳತನ, ಹಲ್ಲೆ ಅತಿಯಾಗಿ ಈ ಸರ್ಕಾರ ಆಡಳಿತಕ್ಕೆ ಬಂದ ನಂತರ ಆಗುತ್ತಿದ್ದು, ಇದೀಗ ವಿದ್ಯಾರ್ಥಿನಿಗಳ ಮೇಲೆ ಆ್ಯಸಿಡ್ ಪ್ರಕರಣವಂತು ಆಡಳಿತ ವೈಫಲ್ಯಕ್ಕೆ ಸಾಕ್ಷಿಕರಿಸಿದೆ. ಜಿಲ್ಲೆಯಲ್ಲಿ ಸಂಪೂರ್ಣ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.ಸರ್ಕಾರ ಕಾನೂನು ಸುವ್ಯವಸ್ಥೆ ಬಗ್ಗೆ ಎಚ್ಚರವಾಗದಿದ್ದರೆ ಜನತೆಯೇ ಬೀದಿಗಿಳಿಯಬೇಕಾದ ಸ್ಥಿತಿ ನಿರ್ಮಾಣವಾಗಬೇಕಾದಿತು ಎಂಬ ಎಚ್ಚರಿಕೆಯನ್ನು ಪುತ್ತಿಲ ಪರಿವಾರ ನೀಡುತ್ತದೆ.ಕಡಬ ಆ್ಯಸಿಡ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪುತ್ತಿಲ ಪರಿವಾರ ತಿಳಿಸಿದೆ.