ಕಡಬ: ಕಡಬ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ಮೂವರು ವಿದ್ಯಾರ್ಥಿಗಳಿಗೆ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕಿನ ಎಂ.ಬಿ.ಎ. ವಿದ್ಯಾರ್ಥಿ ಅಬೀನ್ (23ವ)ಎಂಬಾತ ಪೋಲಿಸ್ ವಶಕ್ಕೆ ಪಡೆದಿದ್ದಾರೆ.
ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದ್ದು, ಕಾಲೇಜಿಗೆ ಬೇರೆ ಬೇರೆ ಕಾಲೇಜುಗಳಿಂದ ವಿದ್ಯಾರ್ಥಿಗಳು ಬಂದಿದ್ದು ಈತ ಕೂಡ ಕಾಲೇಜಿಗೆ ಸಮವಸ್ತ್ರದಲ್ಲಿ ಬಂದು ಕಾದು ಕುಳಿತ್ತಿದ್ದ, ಇದೇ ವೇಳೆ ಕೇರಳ ಮೂಲದ ಪಿಯು ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ. ಆಕೆಯ ಪಕ್ಕದಲ್ಲೇ ಕುಳಿತಿದ್ದ ಮತ್ತಿಬ್ಬರು ವಿದ್ಯಾರ್ಥಿನಿಯರು ಆ್ಯಸಿಡ್ ದಾಳಿಗೆ ಒಳಗಾಗಿದ್ದಾರೆ.
ರಾತ್ರಿಯೇ ಕೇರಳದಿಂದ ಬಂದಿದ್ದ ಯುವಕ ದೂರದ ಸಂಬಂಧಿ ವಿದ್ಯಾರ್ಥಿನಿಯನ್ನು ಎರಡು ವರ್ಷದಿಂದ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಪ್ರೀತಿ ನಿರಾಕರಿಸಿದ ಹಿನ್ನಲೆಯಲ್ಲಿ ಈ ಆ್ಯಸಿಡ್ ದಾಳಿ ಮಾಡಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಡಿ ವೈ ಎಸ್ ಪಿ ಅರುಣ್ ನಾಗೇಗೌಡ, ಪುತ್ತೂರು ಉಪ ವಿಭಾಗಾಧಿಕಾರಿ ಜೊಬಿನ್ ಮಹಾಪಾತ್ರ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ