ಉಪ್ಪಿನಂಗಡಿ:ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪುರಸ್ಕಾರ ಪ್ರದಾನ

0

ಉಪ್ಪಿನಂಗಡಿ: ಜೇಸಿಐ ಉಪ್ಪಿನಂಗಡಿ ಘಟಕದ ವತಿಯಿಂದ ಜೇಸಿಐ ಭಾರತ ಮತ್ತು ವಲಯ ಹದಿನೈದರ ಮಾರ್ಗದರ್ಶನದಂತೆ 2024ನೇ ಸಾಲಿನ ಫೆಬ್ರವರಿ ತಿಂಗಳ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪುರಸ್ಕಾರವನ್ನು ಮೆಸ್ಕಾಂ ಸಿಬ್ಬಂದಿ ಅಕ್ಬರ್ ಆದರ್ಶನಗರ ಅವರಿಗೆ ನೀಡಿ ಗೌರವಿಸಲಾಯಿತು.


ಅಧ್ಯಕ್ಷತೆ ವಹಿಸಿದ್ದ ಜೇಸಿಐ ಉಪ್ಪಿನಂಗಡಿ ಘಟಕದ ಅಧ್ಯಕ್ಷೆ ಲವೀನಾ ಪಿಂಟೊ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಘಟಕದ ಪೂರ್ವಾಧ್ಯಕ್ಷರಾದ ಉಮೇಶ್ ಆಚಾರ್ಯ, ಮೋನಪ್ಪ ಪಮ್ಮನಮಜಲು , ಕಾರ್ಯದರ್ಶಿ ಸುರೇಶ್ ಹಾಗೂ ಸನ್ಮಾನಿತರ ಪೋಷಕರು, ಪತ್ನಿ ಮತ್ತು ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here