ಪಾಂಬಾರು : ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಮೃತ್ಯು

0

ಪುತ್ತೂರು :ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸುಳ್ಯದ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.

ಸುಳ್ಯ ತಾಲೂಕಿನ ಐವರ್ನಾಡು ಪಾಂಬಾರು ಸೋಮಸುಂದರ ಎಂಬವರ ಪುತ್ರಿ ಪುತ್ತೂರಿನ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಆರತಿ ಮೃತಪಟ್ಟವರು.ಆರತಿ 15ದಿನಗಳ ಹಿಂದೆ ವಿಷ ಸೇವಿಸಿದ್ದು,ಸುಳ್ಯದಲ್ಲಿ ಪ್ರಾಥಾಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿಂದ ವೈದ್ಯರ ಸಲಹೆಮೇರೆಗೆ ಸುಲ್ಯಕ್ಕೆ ತಂದು ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ. ಮೃತರು ತಂದೆ,ತಾಯಿ, ಸಹೋದರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here