ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿಯನ್ನು ತರಾಟೆಗೆತ್ತಿಕೊಂಡ ಶಾಸಕ ಅಶೋಕ್ ರೈ

0

ಪುತ್ತೂರು: ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಜಾಗದ ವಿಚಾರಕ್ಕೆ ಸಂಬಂದಿಸಿದ ದಾಖಲೆಗಳ ನೀಡಲು ಸತಾಯಿಸುತ್ತಿರುವ ಆರೋಪದಲ್ಲಿ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿಯನ್ನು ಶಾಸಕ ಅಶೋಕ್ ಕುಮಾರ್ ರೈ ತರಾಟೆಗೆತ್ತಿಕೊಂಡ ಘಟನೆ ಅ.5ರಂದು ನಡೆದಿದೆ.


ಅಪರಾಹ್ನ ಸಹಾಯಕ ಆಯುಕ್ತರ ಕಚೇರಿಗೆ ದಿಡೀರನೆ ಭೇಟಿ ನೀಡಿದ ಶಾಸಕರು, ಕೇಸ್ ವರ್ಕರ್ ಪೂವಪ್ಪ ಅವರನ್ನು ತರಾಟೆಗೆತ್ತಿಕೊಂಡರು.ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ನಾನೇನು ನನ್ನ ಮನೆ ಕೆಲಸಕ್ಕೆ ಕರೆ ಮಾಡಿರುವುದಲ್ಲ. ಸ್ವಲ್ಪ ಜವಾಬ್ದಾರಿಯಿಂದ ವರ್ತಿಸಿ ಎಂದ ಶಾಸಕರು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಜಾಗದ ವಿಚಾರಕ್ಕೆ ಸಂಬಂಧಿಸಿ ಫೈಲ್ ಪುಟಪ್ ಮಾಡದೆ ಸತಾಯಿಸುತ್ತಿರುವುದರ ಬಗ್ಗೆ ವಿಚಾರಿಸಿದ ಶಾಸಕರು ಶನಿವಾರದೊಳಗೆ ಫೈಲ್ ಪುಟಪ್ ಆಗಬೇಕು. ಇಲ್ಲದಿದ್ದರೆ ಶನಿವಾರ ಸಂಜೆ ಕಚೇರಿಗೆ ಆಗಮಿಸುವುದಾಗಿ ಎಚ್ಚರಿಕೆ ನೀಡಿದರು.

LEAVE A REPLY

Please enter your comment!
Please enter your name here