ಶಾಂತಿಗೋಡು ಸರಕಾರಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

0

ಪುತ್ತೂರು: ಶಾಂತಿಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು. ಸರ್ ಸಿ.ವಿ.ರಾಮನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯಗುರು ಸವಿತ ಕುಮಾರಿ ಎಂ ಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಂತಿಗೋಡು ಕಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಜಯಲಕ್ಷ್ಮೀ ದೀಪ ಬೆಳಗಿಸಿ ಉದ್ಘಾಟಿಸಿ, ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಶಿಕ್ಷಕ ವೃಂದದವರಾದ ಸುನೀಲ್ ಎಂ. ಆರ್ , ಕೃಷ್ಣವೇಣಿ ಕೆ.ಪಿ ಭಟ್ , ಲೀಲಾವತಿ ಕೆ. ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 26 ವಿಜ್ಞಾನಿಗಳ ಭಾವಚಿತ್ರಗಳನ್ನು ಶಾಲಾ ಪ್ರಭಾರ ಮುಖ್ಯಗುರು ಸವಿತಾ ಎಂ.ಡಿಯವರು ಶಾಲೆಗೆ ಕೊಡುಗೆಯಾಗಿ ನೀಡಿದರು. ಶಿಕ್ಷಕರ ಮಾರ್ಗದರ್ಶನದಲ್ಲಿ ಮಕ್ಕಳಿಂದ ಪ್ರಾತ್ಯಕ್ಷಿತ ಸರಳ ಪ್ರಯೋಗಗಳನ್ನು ಮಾಡಿಸಿದರು. ಎಸ್ ಡಿ ಎಮ್ ಸಿ ಅಧ್ಯಕ್ಷ ಯೋಗೀಶ್ ಪಿ ನಾಯಕ್ ಮಾತನಾಡಿ, ಶುಭ ಹಾರೈಸಿದರು. ಜಿಪಿಟಿ ಶಿಕ್ಷಕ ಸುನೀಲ್ ಎಂ. ಆರ್ ಸ್ವಾಗತಿಸಿ, ವಂದಿಸಿ,ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here