ರಾಜ್ಯಮಟ್ಟದ ಪುರುಷರ ಕಬಡ್ಡಿ: ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು ತೃತೀಯ

0

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಗಳಿಸಿಕೊಂಡಿದೆ.


ತುಮಕೂರಿನ ಸಿದ್ದಗಂಗಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮ್ಯಾಟ್ ಅಂಕಣದಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ರಾಜ್ಯಾದ್ಯಂತ ಎಂಟು ವಿಭಾಗದ ಒಟ್ಟು 16 ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ತಂಡವು ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.ಮಂಗಳೂರಿನಲ್ಲಿ ನಡೆದ ಮಂಗಳೂರು ವಿಭಾಗಮಟ್ಟದ ಸ್ಪರ್ಧೆಯಲ್ಲಿ ಕಾಲೇಜು ತಂಡವು ಛಾಂಪಿಯನ್ ಆಗಿ ರಾಜ್ಯಮಟ್ಟಕ್ಕೆ ಅರ್ಹತೆಯನ್ನು ಗಳಿಸಿಕೊಂಡಿತ್ತು.


ತೃತೀಯ ಮೆಕ್ಯಾನಿಕಲ್ ವಿಭಾಗದ ದೀಕ್ಷಿತ್.ಬಿ, ತೃತೀಯ ಎಲೆಕ್ಟ್ರಾನಿಕ್ಸ್ ವಿಭಾಗದ ಶ್ರವಣ್ ಕುಮಾರ್ ರೈ, ಗುರುಚರಣ್, ವಿಘ್ನೇಶ್ ಭಂಡಾರಿ, ತೃತೀಯ ಎಐಎಂಎಲ್ ವಿಭಾಗದ ಪ್ರಫುಲ್, ಪುಷ್ಪಕ್.ಕೆ.ಎ, ದ್ವಿತೀಯ ಮೆಕ್ಯಾನಿಕಲ್ ವಿಭಾಗದ ಹಿತೇಶ್.ಒ, ಅಂತಿಮ ಮೆಕ್ಯಾನಿಕಲ್ ವಿಭಾಗದ ಸ್ವಸ್ತಿಕ್.ಬಿ.ಎಸ್, ದ್ವಿತೀಯ ಎಲೆಕ್ಟ್ರಾನಿಕ್ಸ್ ವಿಭಾಗದ ಗಣೇಶ್ ಕುಮಾರ್.ಸಿ.ಎಲ್, ದ್ವಿತೀಯ ಡಾಟಾ ಸೈನ್ಸ್ ವಿಭಾಗದ ಮನೀಶ್.ಎನ್.ಆರ್, ದ್ವಿತೀಯ ಎಂಬಿಎ ವಿಭಾಗದ ಚರಣ್.ಕೆ, ಪ್ರಥಮ ಎಂಬಿಎ ವಿಭಾಗದ ಬಬಿತ್‌ರಾಜ್.ಎ.ಪೂಜಾರಿ ತಂಡದ ಆಟಗಾರರಾಗಿದ್ದಾರೆ.


ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಕಬಡ್ಡಿ ಆಟಗಾರ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ ದೈಹಿಕ ಶಿಕ್ಷಣ ನಿರ್ದೇಶಕ ದೀಕ್ಷಿತ್ ತಂಡಕ್ಕೆ ತರಬೇತಿಯನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ ಪ್ರಸನ್ನ.ಕೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here