ಮಾ.9: ಪುತ್ತೂರು ಮಹಿಳಾ ಗೌಡ ಸಂಘದಿಂದ ಮಹಿಳಾ ದಿನಾಚರಣೆ – ವಿವಿಧ ಸ್ಪರ್ಧೆ

0

ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಮಹಿಳಾ ಗೌಡ ಸಂಘದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾ.9ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಆಚರಿಸಲಾಗುವುದು.


ಮಧ್ಯಾಹ್ನದಿಂದ ಸಂಜೆಯ ತನಕ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಸ್ಪರ್ಧಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ನಡುವೆ ಸಭಾ ಕಾರ್ಯಕ್ರಮ ನಡೆಯಲಿದ್ದು ವಚನ ಜಯರಾಮ್ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭ ಸಾಧಕ ಮಹಿಳೆಯರನ್ನು ಗೌರವಿಸಲಾಗುವುದು. ಸಂಜೆ ಮಹಿಳೆಯರಿಂದ ಯಕ್ಷಗಾನ ತಾಳಮದ್ದಳೆ ನಡೆಯಲಿದೆ ಎಂದು ಒಕ್ಕಲಿಗ ಮಹಿಳಾ ಗೌಡ ಸಂಘದ ಅಧ್ಯಕ್ಷೆ ವಾರಿಜ ಕೆ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here