ಈಶ್ವರಮಂಗಲ: ಕರ್ನೂರು ವ್ಯಾಪ್ತಿಯಲ್ಲಿ ಸಂಚಾರಿ ಹಾಲು ನಿರ್ವಹಣೆಗೆ ಚಾಲನೆ

0

ಈಶ್ವರಮಂಗಲ: ಈಶ್ವರಮಂಗಲ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕರ್ನೂರು ವ್ಯಾಪ್ತಿಯಲ್ಲಿ ಸಂಚಾರಿ ಹಾಲು ಸಂಗ್ರಹಣೆಗೆ ಚಾಲನೆ ನೀಡಲಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮ ಮಾ.1ರಂದು ಕರ್ನೂರು ಸರಕಾರಿ ಹಿ.ಪ್ರಾ ಶಾಲೆಯ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ದಿನೇಶ್ ರೈ ಕುತ್ಯಾಳರವರು ವಹಿಸಿಕೊಂಡಿದ್ದರು. ಉದ್ಘಾಟನೆಯನ್ನು ದ.ಕ ಹಾಲು ಉತ್ಪಾದಕರ ಸಹಕಾರಿ ಒಕ್ಕೂಟದ ಉಪವ್ಯವಸ್ಥಾಪಕ ಡಾ. ಸತೀಶ್ ರಾವ್ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ನೆ.ಮುಡ್ನೂರು ಗ್ರಾ.ಪಂ ಸದಸ್ಯರಾದ ಶ್ರೀರಾಮ ಪಕ್ಕಳ , ಪ್ರದೀಪ್ ಕುಮಾರ್ ಕರ್ನೂರು ಹಾಗೂ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರ ಸೂಫಿ ಬಂಟಡ್ಕ, ಹಾಗೂ ದ.ಕ ಹಾಲು ಉತ್ಪಾದಕರ ಸಹಕಾರಿ ಒಕ್ಕೂಟದ ವಿಸ್ತರಣಾಧಿಕಾರಿ ಮಾಲತಿ ಉಪಸ್ಥಿತರಿದ್ದರು.

 ದ.ಕ ಹಾಲು ಉತ್ಪಾದಕರ ಸಹಕಾರಿ ಒಕ್ಕೂಟದ ವತಿಯಿಂದ ಹಾಗೂ ಸರಕಾದಿಂದ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಹೈನುಗಾರಿಕೆ ದೊರೆಯುವ ಸೌಲಭ್ಯದ ಬಗ್ಗೆ ದ.ಕ ಹಾಲು ಉತ್ಪಾದಕರ ಸಹಕಾರಿ ಒಕ್ಕೂಟದ ಉಪವ್ಯವಸ್ಥಾಪಕ ಡಾ. ಸತೀಶ್ ರಾವ್ ರವರು ತಿಳಿಸಿದರು.

ಸಂಘದ ಉಪಾಧ್ಯಕ್ಷೆ ಎಸ್ ಜಯಂತಿ ಪ್ರಾರ್ಥಿಸಿ, ಸಂಘದ ನಿರ್ದೇಶಕ ಶಿವರಾಮ ಶರ್ಮ ಕತ್ರಿಬೈಲು ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಕಗುರು ಪ್ರಸಾದ ಎಂ ವಂದಿಸಿ, ಪುತ್ತೂರು ತಾಲೂಕು ಯೂನಿಯನ್ನಿನ ಅಧ್ಯಕ್ಷ ಪ್ರವೀಣ್ ರೈ ಮೇನಾಲ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here