ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನುಗ್ಗಿದ ಕಳ್ಳರು ನಗದು ಹಣ ದೋಚಿದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.
ಶಾಲೆಯ ಬಾಗಿಲ ಚಿಲಕವನ್ನು ಮೀಟಿ ಒಳನುಗ್ಗಿದ ಕಳ್ಳರು ಶಾಲಾ ಕಚೇರಿಯಲ್ಲಿದ್ದ ಕಪಾಟಿನ ಬಾಗಿಲು ಮುರಿದು ಕಪಾಟಿನಲ್ಲಿದ್ದ 1,500 ರೂಪಾಯಿ ನಗದು ಹಣವನ್ನು ಕದ್ದೊಯ್ದಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕಿ ತಾರಮಣಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.