ಪುಣಚ ಮಹಿಷಮರ್ದಿನಿ ಜಾತ್ರೋತ್ಸವ- ಪೂರ್ವಸಿದ್ದತಾ ಸಭೆ

0

ಪುಣಚ: ಪುಣಚ ಶ್ರೀಮಹಿಷಮರ್ದಿನಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಎ.7ರಿಂದ 11ರವರೆಗೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯು ದೇವಸ್ಥಾನದಲ್ಲಿ ಮಾ.8ರಂದು ನಡೆಯಿತು.
ಆಡಳಿತ ಸಮಿತಿ ಅಧ್ಯಕ್ಷ ಎಸ್ ಆರ್ ರಂಗಮೂರ್ತಿ ಮಾತನಾಡಿ ಕಳೆದ ಬ್ರಹ್ಮಕಲಶ ಸಂಧರ್ಭದಲ್ಲಿ ಸಹಕರಿಸಿದ ಸಮಸ್ತ ಭಕ್ತಾಧಿಗಳಿಗೆ ಅಭಿನಂದನೆ ಸಲ್ಲಿಸಿ, ಮುಂಬರುವ ಜಾತ್ರಾ ಮಹೋತ್ಸವದ ಪೂರ್ವಭಾವಿ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿ ಭಕ್ತಾಧಿಗಳು ಎಲ್ಲಾ ರೀತಿಯ ಸಂಪೂರ್ಣ ಸಹಕಾರ ನೀಡಿ ಯಶಸ್ವಿಗೊಳಿಸಬೇಕು ಎಂದರು.
ಆಡಳಿತ ಸಮಿತಿ ಉಪಾಧ್ಯಕ್ಷ ಮಾರಪ್ಪ ಶೆಟ್ಟಿ ಬೈಲುಗುತ್ತು, ಕೋಶಾಧಿಕಾರಿ ಶಂಕರನಾರಾಯಣ ಭಟ್ ಮಲ್ಯ, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಶೆಟ್ಟಿ ದೇವರಗುಂಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಮಕೃಷ್ಣ ಬಿ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ವಂದಿಸಿದರು. ಆಡಳಿತ ಸಮಿತಿ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here