ಎಸ್‌ಎಂಎ ದ.ಕ ಈಸ್ಟ್ ಜಿಲ್ಲಾಧ್ಯಕ್ಷರಾಗಿ ಯೂಸುಫ್ ಗೌಸಿಯಾ ಸಾಜ ಆಯ್ಕೆ

0

ಪುತ್ತೂರು: ಸುನ್ನೀ ಮ್ಯಾನೇಜ್‌ಮೆಂಟ್ ಎಸೋಸಿಯೇಶನ್(ಎಸ್‌ಎಂಎ) ದ.ಕ ಈಸ್ಟ್ ಜಿಲ್ಲಾಧ್ಯಕ್ಷರಾಗಿ ಯೂಸುಫ್ ಗೌಸಿಯಾ ಸಾಜ ಆಯ್ಕೆಯಾಗಿದ್ದಾರೆ.

ಎಸ್‌ಎಂಎ ದ.ಕ ಈಸ್ಟ್ ಜಿಲ್ಲಾಧ್ಯಕ್ಷರಾಗಿದ್ದ ಸಯ್ಯದ್ ಸಾದಾತ್ ತಂಙಳ್ ಕರ್ವೇಲ್ ಅವರು ಇತ್ತೀಚೆಗೆ ನಿಧನ ಹೊಂದಿದ್ದು, ಅವರ ತೆರವಾದ ಸ್ಥಾನಕ್ಕೆ ಯೂಸುಫ್ ಗೌಸಿಯಾ ಅವರನ್ನು ಆಯ್ಕೆ ಮಾಡಲಾಗಿದೆ. ಸಾರ್ಯ ಅಲ್ ಅಮಲ್ ಜುಮಾ ಮಸೀದಿಯ ಅಧ್ಯಕ್ಷರಾಗಿರುವ ಯೂಸುಫ್ ಗೌಸಿಯಾ ಅವರು ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಆಡಳಿತ ಸಮಿತಿಯ ಕೋಶಾಧಿಕಾರಿಯಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೇ ವಿವಿಧ ಸಂಘ ಸಂಸ್ಥೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here