ಮಾ.11 ಕೆಮ್ಮಾಯಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಸಾರ್ವಜನಿಕ ಸತ್ಯನಾರಾಯಣ ಪೂಜೆ

0

ಕೆಮ್ಮಾಯಿ:ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಕೆಮ್ಮಾಯಿಯಲ್ಲಿ ಶ್ರೀ ಮಹಾವಿಷ್ಣು ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಶ್ರೀ ಮಹಾವಿಷ್ಣುಮೂರ್ತಿ ಭಜನಾ ಮಂಡಳಿಯ ವತಿಯಿಂದ 42ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಮಾ.11ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿದೆ.

ಶ್ರೀ ಮಹಾವಿಷ್ಣುಮೂರ್ತಿ ದೇವರಿಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶಾಭಿಷೇಕ, ಸೀಯಾಳಾಭಿಷೇಕ, ಶ್ರೀ ನಾಗ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ನಾಗತಂಬಿಲ, ಮಹಾಪೂಜೆ ನಡೆದು ರಾತ್ರಿ 7ರಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ನಡೆಯಲಿದೆ ಎಂದು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಮತ್ತು ಶ್ರೀ ಮಹಾವಿಷ್ಣುಮೂರ್ತಿ ಭಜನಾ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here