ದ.ಕ.ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ- ಕೃಷ್ಣಪ್ರಸಾದ್ ಆಳ್ವ,ಸಿ.ಜೆ.ಸೈಮನ್,ನಝೀರ್ ಮಠ,ಅಶ್ರಫ್ ಬಸ್ತಿಕ್ಕಾರ್- ಪ್ರ.ಕಾರ್ಯದರ್ಶಿಗಳು:ಅರ್ಷದ್ ದರ್ಬೆ ಕಾರ್ಯದರ್ಶಿ

0

ಪುತ್ತೂರು:ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ಗೆ ನೂತನ ಪದಾಧಿಕಾರಿಗಳ ನೇಮಕವಾಗಿದ್ದು ಪುತ್ತೂರು,ಉಪ್ಪಿನಂಗಡಿ ಮತ್ತು ಕಡಬದ ಐವರಿಗೆ ಅವಕಾಶ ನೀಡಲಾಗಿದೆ.ವಿಧಾನಪರಿಷತ್ ಶಾಸಕರೂ ಆಗಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರು ನೂತನ ಪದಾಧಿಕಾರಿಗಳನ್ನು ನೇಮಿಸಿ ಆದೇಶಿಸಿದ್ದಾರೆ.

ಹೊಸದಾಗಿ ಎಂಟು ಮಂದಿ ಸಕ್ರಿಯ ಕಾರ್ಯಕರ್ತರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ, ನಾಲ್ವರನ್ನು ಉಪಾಧ್ಯಕ್ಷರಾಗಿ ಮತ್ತು 8 ಮಂದಿಯನ್ನು ಕಾರ್ಯದರ್ಶಿಗಳಾಗಿ ನೇಮಕಗೊಳಿಸಲಾಗಿದೆ.ಉಪ್ಪಳಿಗೆಯ ಕೃಷ್ಣಪ್ರಸಾದ್ ಆಳ್ವ, ಕಡಬದ ಸಿ.ಜೆ.ಸೈಮನ್, ಉಪ್ಪಿನಂಗಡಿಯ ಅಬ್ದುಲ್ ನಝೀರ್ ಮಠ, ಅಶ್ರಫ್ ಬಸ್ತಿಕ್ಕಾರ್ ಅವರನ್ನು ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕಗೊಳಿಸಲಾಗಿದೆ.ಅರ್ಷದ್ ದರ್ಬೆ ಅವರನ್ನು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನೇಮಕಗೊಳಿಸಲಾಗಿದೆ.

ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಕೃಷ್ಣಪ್ರಸಾದ್ ಆಳ್ವ ಅವರು ಈ ಹಿಂದೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಕೆಡಿಪಿ ನಾಮನಿರ್ದೇಶಿತ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.ಪ್ರಸ್ತುತ ಅವರು ಭೂನ್ಯಾಯ ಮಂಡಳಿ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.ಉಪ್ಪಿನಂಗಡಿಯ ಅಬ್ದುಲ್ ನಝೀರ್ ಮಠ ಅವರು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕಾಂಗ್ರೆಸ್‌ನ ಕಾರ್ಯದರ್ಶಿಯಾಗಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ, ರಾಜ್ಯ ಇಂಟಕ್ ಕಾರ್ಯದರ್ಶಿಯಾಗಿ, ಕೆಪಿಸಿಸಿ ಕಾರ್ಮಿಕ ವಿಭಾಗದ ಉಪಾಧ್ಯಕ್ಷರಾಗಿ ಹುದ್ದೆ ನಿರ್ವಹಿಸಿದ್ದು, ಪ್ರಸ್ತುತ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯದರ್ಶಿಯಾಗಿರುತ್ತಾರೆ.

ಉಪ್ಪಿನಂಗಡಿಯ ಅಶ್ರಫ್ ಬಸ್ತಿಕ್ಕಾರ್ ಅವರು ಉಪ್ಪಿನಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಪುತ್ತೂರು ತಾಲೂಕು ಕೆಡಿಪಿ ಸದಸ್ಯರಾಗಿ, ಗಾಂಪಾ ಗೆಳೆಯರು ಸಂಘಟನೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ನ ವಕ್ತಾರ ಹಾಗೂ ಉಪಾಧ್ಯಕ್ಷರಾಗಿರುತ್ತಾರೆ.ಕಡಬ ನಿವಾಸಿಯಾಗಿರುವ ಸೈಮನ್ ಸಿ.ಜೆ.ಅವರು ವಿದ್ಯಾರ್ಥಿಯಾಗಿದ್ದಾಗ ಎನ್.ಎಸ್.ಯು.ಐ. ಕಾರ್ಯದರ್ಶಿಯಾಗಿ ಬಳಿಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸಿದ್ದರು.ಇದೀಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಅರ್ಷದ್ ದರ್ಬೆ ಅವರು ಈ ಹಿಂದೆ ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸಹಿತ ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು.

LEAVE A REPLY

Please enter your comment!
Please enter your name here