ಬೆಳ್ಳಾರೆ: ದ.ಕ.ಸಂಸದ ಹಾಗೂ ಸುಳ್ಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನದಲ್ಲಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ರಸ್ತೆ ಅಗಲೀಕರಣ, ಇಂಟರ್ ಲಾಕ್ ಅಳವಡಿಕೆ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮವು ಮಾ.8 ರಂದು ನಡೆಯಿತು.
ಸಂಸದ ನಳಿನ್ ಕುಮಾರ್ ಕಟೀಲು, ಶಾಸಕಿ ಭಾಗೀರಥಿ ಮುರುಳ್ಯ ಅವರು ಶಿಲಾನ್ಯಾಸ ನೆರವೇರಿಸಿದರು. ಪ್ರಾರಂಭದಲ್ಲಿ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ವೆಂಕಟಕೃಷ್ಣ ರಾವ್ ಅವರು ಗುದ್ಧಲಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ ವಳಲಂಬೆ, ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಪೆರುವಾಜೆ, ಉಮೇಶ್ ಕೆಎಂಬಿ, ಪೆರುವಾಜೆ ಗ್ರಾ.ಪಂ.ಸದಸ್ಯರಾದ ರೇವತಿ, ಮಾಧವ, ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ ಉದುನಡ್ಕ, ಶ್ರೀನಾಥ ಬಾಳಿಲ, ಪ್ರೀತಂ ರೈ ಪೆರುವಾಜೆ, ಬಿಜೆಪಿ ಜಿಲ್ಲಾ ಯುವಮೋರ್ಛಾ ಕಾರ್ಯಕಾರಿಣಿ ಸದಸ್ಯ ಹರ್ಷಿತ್ ಪೆರುವಾಜೆ, ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರಾದ ಜಯಪ್ರಕಾಶ್ ರೈ ಪೆರುವಾಜೆ, ಕುಶಾಲಪ್ಪ ಪೆರುವಾಜೆ, ನಾರಾಯಣ ಕೊಂಡೆಪ್ಪಾಡಿ, ದೇವಾಲಯದ ವ್ಯವಸ್ಥಾಪಕ ವಸಂತ ಪೆರುವಾಜೆ, ಸಚಿನ್ ರಾವ್ ಪೆರುವಾಜೆ, ರಮೇಶ್ ಮಠತ್ತಡ್ಕ ಮೊದಲಾದವರು ಉಪಸ್ಥಿತರಿದ್ದರು.