ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳೊಲ್ಲೊಂದಾದ ದರ್ಬೆ, ಫಿಲೋನಗರ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳ ವಿದಾಯ ಸಮಾರಂಭವು ಮಾ.9ರಂದು ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ|ಲಾರೆನ್ಸ್ ಮಸ್ಕರೇನ್ಹಸ್ ಮಾತನಾಡಿ, ವಿದ್ಯಾರ್ಥಿಗಳು ಮೌಲ್ಯಯುತ ಗುಣನಡತೆಗಳನ್ನು ತಮ್ಮದಾಗಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಜೀವನದಲ್ಲಿ ಮುನ್ನೆಡೆಯಬೇಕೆಂದು ಹಾರೈಸಿದರು. ವೇದಿಕೆಯಲ್ಲಿ ಫಿಲೋಮಿನಾ ಕ್ಯಾಂಪಸ್ ನಿರ್ದೇಶಕ ವಂ.ಸ್ಥಾನಿ ಪಿಂಟೊರವರು, ಶಾಲಾ ಮುಖ್ಯ ಗುರು ವಂ ಮ್ಯಾಕ್ಸಿಂ ಡಿ’ಸೋಜಾ ಎಂ., ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಗುರು ಸಿಸ್ಟರ್ ಲೋರಾ, ಚರ್ಚ್ ಪಾಲನಾ ಸಮತಿಯ ಉಪಾಧ್ಯಕ್ಷ ಜೆರಾಲ್ಡ್ ಡಿ’ಕೋಸ್ಟಾ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಮೌರಿಸ್ ಕುಟಿನ್ಹಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗನ್ನಿವಾಸ್ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲೆಯ ಮುಖ್ಯ ಗುರು ವಂ| ಮ್ಯಾಕ್ಸಿಂ ಡಿ ಸೋಜಾ ಎಂ. ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಾಲಾ ನಾಯಕ ಅದ್ದಿತ್ ರೈ ಹಾಗೂ ಶ್ರೇಯಾ ಎಸ್, ಗೌಡ ಶಾಲೆಯ ಬಗ್ಗೆ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. 9ನೇ ತರಗತಿಯ ಪುನೀತ್, 10ನೇ ತರಗತಿಯ ವಿದ್ಯಾರ್ಥಿಗಳ ಒಡನಾಟದ ಬಗ್ಗೆ ಮಾತುಗಳನ್ನು ಆಡಿದರು. ಶಾಲಾ ಉಪನಾಯಕಿ ಶ್ರೀಶಾ ಆರ್ ಎಸ್. ವಂದಿಸಿದರು. 9ನೇ ತರಗತಿಯ ಹನ್ಪ ಕಾರ್ಯಕ್ರಮ ನಿರೂಪಿಸಿದರು.