ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ಮತ್ತು ಸರಕಾರಿ ಪ್ರೌಢಶಾಲೆ ಪಾಪೆಮಜಲು ಇದರ ಆಶ್ರಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ “ಪರೀಕ್ಷಾ ತಂತ್ರಗಳು ಹಾಗೂ ಭವಿಷ್ಯದ ಪಥ”ದ ಮಾಹಿತಿ ಕಾರ್ಯಾಗಾರ ಪಾಪೆಮಜಲು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ಎಸ್. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪಾಪೆಮಜಲು ಪ್ರೌಢಶಾಲೆ ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆಯಾಗಿಲ್ಲ. ಎಲ್ಲಾ ಸೌಲಭ್ಯಗಳು ಇಲ್ಲಿದೆ. ಪತ್ರಕರ್ತರ ಸಂಘದಿಂದ ಉತ್ತಮ ಕಾರ್ಯಕ್ರಮ ಹಮ್ಮಿಕೊಡಿದ್ದೀರಿ ಎಂದು ಹೇಳಿ ಶುಭಹಾರೈಸಿದರು. ಸಂಪನ್ಮೂಲ ವ್ಯಕ್ತಿ, ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಲಕ್ಷ್ಮೀಕಾಂತ್ ರೈ ಅನಿಕೂಟೇಲು ಪರೀಕ್ಷಾ ತಂತ್ರಗಳು ಹಾಗೂ ಭವಿಷ್ಯದ ಪಥದ ಬಗ್ಗೆ ಮಾಹಿತಿ ನೀಡಿ ಪರೀಕ್ಷೆಯನ್ನು ಎದುರಿಸಲು ಬೇಕಾದ ಸಿದ್ಧತೆಗಳ ಬಗ್ಗೆ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ತಿಲಕ್ ರೈ ಕುತ್ಯಾಡಿ ಮಾತನಾಡಿ, ಪತ್ರಕರ್ತರ ಸಂಘದಿಂದ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಸಮಾಜದಲ್ಲಿ ಬದಲಾವಣೆ ತರುವ ಕಾರ್ಯಕ್ರಮಗಳನ್ನು ಮಾಡಿದ್ದೇವೆ. ಮಕ್ಕಳು ಪರೀಕ್ಷಾ ಭಯವನ್ನು ಬಿಟ್ಟು ಸಾಧನೆ ಮಾಡಿ ಎಂದರು. ಮುಖ್ಯಗುರು ಮೋನಪ್ಪ ಪೂಜಾರಿ ಸ್ವಾಗತಿಸಿ ಶಿಕ್ಷಕ ಹರಿಪ್ರಸಾದ್ ವಂದಿಸಿದರು. ವಿದ್ಯಾರ್ಥಿ ಭವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಕರ್ನಾಟಕ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ರೈ ಕೋಡಂಬು, ಉಪಾಧ್ಯಕ್ಷ ಶರತ್ ಕುಮಾರ್ ಪಾರ, ಜತೆ ಕಾರ್ಯದರ್ಶಿ ಪ್ರಜ್ವಲ್ ಪುತ್ತೂರು, ಮಾಜಿ ಕೋಶಾಧಿಕಾರಿ ನರೇಶ್ ಜೈನ್, ಸುದ್ದಿ ಪ್ರತಿನಿಧಿ ಅಬೂಬಕ್ಕರ್ ಕೌಡಿಚ್ಚಾರು, ಶಿಕ್ಷಕರುಗಳಾದ ಶಾಲೆಟ್ ಜೇನ್ ರೆಬೆಲ್ಲೊ, ಪೂರ್ಣಿಮಾ ಶೆಟ್ಟಿ, ಹರಿಣಾಕ್ಷಿ ಕೆ, ಇಂದಿರಾ ಕೆ, ಸವಿತಾ ಪಿ, ದೈಹಿಕ ಶಿಕ್ಷಣ ಶಿಕ್ಷಕಿ ಪ್ರವೀಣ ರೈ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.