ಬಡಗನ್ನೂರು: ಪಂಚಾಯತ್ ಬಡಗನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರ ಈಶ್ವರಮಂಗಲ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ವಿಭಾಗ ಮಂಗಳೂರು ರೋಟರಿ ಕ್ಲಬ್ ಕಣ್ಣಿನ ಆಸ್ಪತ್ರೆ ಮತ್ತೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು ದ.ಕ. ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ದ.ಕ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಅರಿಯಡ್ಕ ವಲಯ ಕೋಟಿ ಚೆನ್ನಯ ಯುವಕ ಮಂಡಲ ಪಡುಮಲೆ, ಹಾಲು ಉತ್ಪಾದಕರ ಸಹಕಾರಿ ಸಂಘ ಬಡಗನ್ನೂರು ಶ್ರೀ ಶಾಸ್ತರ ಸ್ಪೋಟ್ಸ್ ಕ್ಲಬ್ ಪಡುಮಲೆ, ಶ್ರೀ ದೇಯಿ ಬೈದೆದಿ ಯುವತಿ ಮಂಡಲ ಪಡುಮಲೆ ಶ್ರೀ ಕೃಷ್ಣ ಯುವಕ ಮಂಡಲ ಪಟ್ಟೆ, ಸಂಗಮ ಸಂಜೀವಿನಿ ಮಹಿಳಾ ಒಕ್ಕೂಟ ಗ್ರಾ. ಪಂ. ಬಡಗನ್ನೂರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಗ್ರಾ.ಪಂ. ಬಡಗನ್ನೂರು ಮಂಗಳ ಕಲಾ ಸಾಹಿತ್ಯ ವೇದಿಕೆ ಪಟ್ಟಿ ಬಡಗನ್ನೂರು ಘಟಕ ಪುತ್ತೂರು ಯಶಸ್ವಿ ನಾಗರಿಕ ಸೇವಾ ಸಂಘ ವಾಸುದೇವನಗರ ಕಾರ್ಕಳ ಇವರ ಸಂಯುಕ್ತಾಶ್ರಯದಲ್ಲಿ . ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ ಎಂಬ ಕಾರ್ಯಕ್ರಮ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಬಡಗನ್ನೂರು ಗ್ರಾ.ಪಂ ಸಭಾಂಗಣದಲ್ಲಿ ಮಾ.10 ರಂದು ನಡೆಯಿತು.
ಕಾರ್ಯಕ್ರಮವನ್ನು ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ದೇವಕಜೆ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಶುಭ ಹಾರೈಸಿದರು. ಪ್ರಸಾದ್ ನೇತ್ರಾಲಯ ಸಾರ್ವಜನಿಕ ಸಂಪರ್ಕ ಅಧಿಕಾರಿ ನಿಶ್ಚಿತ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳುವಮತೆ ಹೇಳಿದರು.
ಪ್ರಸಾದ್ ನೇತ್ರಾಲಯದ ವೈದ್ಯಾಧಿಕಾರಿ ಡಾ ಸ್ನೇಹಾ, ಬಡಗನ್ನೂರು ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ಸೀತಾರಾಮ ಗೌಡ ಉಳಯ, ಉಪಾಧ್ಯಕ್ಷೆ ಸುಶೀಲಾ ಪಕ್ಯೋಡ್, ಪ್ರಾಥಮಿಕ ಅರೋಗ್ಯ ಸುರಕ್ಷಾಧಿಕಾರಿ ನಂದಿನಿ. ಕೆ, ಪಡುವನ್ನೂರು ಸಮುದಾಯ ಅರೋಗ್ಯ ಅಧಿಕಾರಿ ದಿವ್ಯಶ್ರೀ ,ಬಡಗನ್ನೂರು ಸಮುದಾಯ ಅರೋಗ್ಯ ಅಧಿಕಾರಿ ಪ್ರಜ್ಞಾ ಬಿ, ಕರ್ನೂರು ಸಮುದಾಯ ಅರೋಗ್ಯ ಅಧಿಕಾರಿ ಸಂದ್ಯಾ ತಾಲೂಕು ಅರೋಗ್ಯ ಸಂಯೋಜಕಿ ಅಶ್ವಿನಿ ಎಂ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಈಶ್ವರಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಬಿ.ಪಿ, ಸುಗರ್,ತಪಾಸಣೆ ನಡೆಯಿತು.ಬಡಗನ್ನೂರು ಗ್ರಾ.ಪಂ ಮಾಜಿ ಅಧ್ಯಕ್ಷ ಸಂತೋಷ್ ಆಳ್ವ ಸ್ವಾಗತಿಸಿ ,ವಂದಿಸಿದರು.ಶಿಬಿರದ ಸಂಯೋಜಕ ಮುರಳೀಧರ್ ಭಟ್ ಕಾರ್ಯಕ್ರಮ ನಿರೂಪಿಸಿದರು.ಗ್ರಂಥಪಾಲಕಿ ಪ್ರೀಯಾ ಸೋಣಗೇರಿ ಸಹಕರಿಸಿದರು.